ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ವಣಹವಾಮಾನ, ಬಿಸಿಲಿನ ತೀವ್ರತೆ ಮತ್ತು ಗಾಳಿಯ ವೇಗದಿಂದಾಗಿ ಬೆಂಕಿಬೇಗವಾಗಿ ಹರಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅರಣ್ಯದ ಒಳಭಾಗದ ದಟ್ಟ ಪ್ರದೇಶಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿಕೊಂಡಿರುವುದರಿಂದ ನಂದಿಸುವ ಕಾರ್ಯಕ್ಕೆ ಅಡಚಣೆ ಉಂಟಾಗಿದೆ. ಈ ಅಗ್ನಿ ಅವಘಡದಿಂದ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದ್ದು, ವನ್ಯಜೀವಿಗಳಿಗೆ ತೀವ್ರ ಅಪಾಯ ಎದುರಾಗಿದೆ. ಸ್ಥಳೀಯ ನಿವಾಸಿಗಳಿಗೆ ಎಚ್ಚರ ನೀಡಲಾಗಿದ್ದು, ಬೆಂಕಿಯ ಮೂಲದ ಬಗ್ಗೆ ಅರಣ್ಯ ಇಲಾಖೆ ತನಿಖೆ ಆರಂಭಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ವಲಯದ ಮಾರುತ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದೆ. ನಿರಂತರವಾಗಿ ಬೀಸುತ್ತಿರುವ ಭಾರೀ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ವೇಗವಾಗಿ ಹರಡುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.
ಕಾಡ್ಗಿಚ್ಚಿನಿಂದ ಅರಣ್ಯದ ದಟ್ಟ ಪ್ರದೇಶಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದ್ದು, ಕ್ಷಣದಿಂದ ಕ್ಷಣಕ್ಕೆ ವ್ಯಾಪ್ತಿ ಹೆಚ್ಚಾಗುತ್ತಿದೆ. ಗುಡ್ಡಗಾಡು ಪ್ರದೇಶ ಮತ್ತು ಬಲವಾದ ಗಾಳಿಯ ಕಾರಣದಿಂದಾಗಿ ಬೆಂಕಿ ನಂದಿಸುವ ಕಾರ್ಯಾಚರಣೆಗೆ ತೀವ್ರ ಅಡಚಣೆ ಎದುರಾಗಿದೆ.
ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಾಯದೊಂದಿಗೆ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ವನ್ಯಜೀವಿ ಹಾಗೂ ಪರಿಸರಕ್ಕೆ ಭಾರೀ ಹಾನಿ ಭೀತಿ ಎದುರಾಗಿದ್ದು, ಬೆಂಕಿಯ ಮೂಲದ ಕುರಿತು ತನಿಖೆ ಆರಂಭಿಸಲಾಗಿದೆ.
ಚಾರ್ಮಾಡಿ ಘಾಟ್ ಸಮೀಪದ ವಲಯ ಮಾರುತ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಸಂಭವಿಸಿದ್ದು, ರಸ್ತೆಯಿಂದ ಸುಮಾರು 2 ಕಿ.ಮೀ ದೂರದ ಅರಣ್ಯ ಪ್ರದೇಶದವರೆಗೂ ಬೆಂಕಿ ವ್ಯಾಪಕವಾಗಿ ಹರಡಿದೆ. ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಅರಣ್ಯ ಪ್ರದೇಶ ಹತ್ತಿ ಉರಿಯುತ್ತಿದ್ದು, ಚಾರ್ಮಾಡಿ ಘಾಟ್ ಮುಖ್ಯ ರಸ್ತೆಯವರೆಗೂ ಬೆಂಕಿಯ ಬೆಳಕು ಸ್ಪಷ್ಟವಾಗಿ ಕಾಣುತ್ತಿದೆ.
ಈ ಅಗ್ನಿ ಅವಘಡದಿಂದ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದ್ದು, ಅತ್ಯಮೂಲ್ಯ ಗಿಡಮೂಲಿಕೆಗಳು ಮತ್ತು ಸಸ್ಯ ಸಂಪತ್ತು ಸಂಪೂರ್ಣವಾಗಿ ನಾಶವಾಗಿದೆ. ಕಾಡ್ಗಿಚ್ಚಿನ ಪರಿಣಾಮ ನೂರಾರು ಪ್ರಾಣಿ-ಪಕ್ಷಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಅರಣ್ಯ ಅಧಿಕಾರಿಗಳ ಪ್ರಕಾರ, ಬೆಂಕಿ ಹೊತ್ತಲು ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಚಾರ್ಮಾಡಿ ಗುಡ್ಡ ಪ್ರದೇಶದಲ್ಲಿ ಬೀಸುತ್ತಿರುವ ಬಲವಾದ ಗಾಳಿಯಿಂದ ಬೆಂಕಿಯ ಜ್ವಾಲೆ ವೇಗವಾಗಿ ಹರಡುತ್ತಿದ್ದು, ಪರಿಸ್ಥಿತಿ ಆತಂಕಕಾರಿಯಾಗಿದೆ. ಈ ಕ್ಷಣದವರೆಗೂ ಬೆಂಕಿ ತನ್ನ ರೌದ್ರನರ್ತನ ಮುಂದುವರಿಸಿಕೊಂಡಿದ್ದು, ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಗಿಚ್ಚು ಪ್ರತಿ ವರ್ಷವೂ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ. ವಿಶೇಷವಾಗಿ ಬೇಸಿಗೆ ಆರಂಭವಾಗುತ್ತಿದ್ದಂತೆ ಚಾರ್ಮಾಡಿ ಘಾಟ್, ಮುಳ್ಳಯ್ಯನಗಿರಿ,ಚರ್ಚೆಗುಡ್ಡ ಸೇರಿದಂತೆ ಇತರ ಅರಣ್ಯ ಪ್ರದೇಶಗಳಲ್ಲಿ ಬೆಂಕಿಯ ಕಡ್ಗಿಚ್ಚು ಮರುಕಳಿಸುತ್ತಲೇ ಬಂದಿದೆ. ಆದರೆ ಈ ಬಾರಿ ಮೂಡಿಗೇರಿ ತಾಲೂಕಿನಲ್ಲಿ ಅಸಾಧಾರಣ ಪ್ರಮಾಣದಲ್ಲಿ ಕಾಡಿಗೆ ಹೆಚ್ಚು ಸಂಭವಿಸಿದ್ದು, ವರ್ಷದ ಆರಂಭದಲ್ಲೇ ಭಾರೀ ಅಗ್ನಿ ಅವಘಡ ನಡೆದಿದೆ.
ಹಿಂದಿನ ವರ್ಷಗಳಲ್ಲಿ ಹೆಚ್ಚಿನವಾಗಿ ಬೇಸಿಗೆ ಕಾಲದಲ್ಲಿ ಮಾತ್ರ ಕಾಣಿಸುತ್ತಿತ್ತು ಕಾಡ್ಗಿಚ್ಚು, ಈ ಬಾರಿ ಚಳಿಗಾಲದಲ್ಲಿ ವ್ಯಾಪಕವಾಗಿ ಹಬ್ಬಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದ ಅರಣ್ಯ ಸಂಪತ್ತು,ವನ್ಯಜೀವಿ ಹಾಗೂ ಪರಿಸರದ ಮೇಲೆ ತೀವ್ರ ಪರಿಣಾಮ ಬೀರುವ ಭೀತಿ ಎದುರಾಗಿದೆ.
ನಿರಂತರವಾಗಿ ಮರುಕಳಿಸುತ್ತಿರುವ ಕಾಡ್ಗಿಚ್ಚುಗಳು ಮಾನವ ನಿರ್ಲಕ್ಷ್ಯವೇ ಅಥವಾ ಉದ್ದೇಶಪೂರ್ವಕ ಕೃತ್ಯವೇ ಎಂಬುದರ ಬಗ್ಗೆ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಅಗ್ನಿ ಅವಘಡಗಳನ್ನು ತಡೆಯಲು ಕಠಿಣ ಕ್ರಮಗಳ ಅಗತ್ಯವಿದೆ ಎಂದು ಅಭಿಪ್ರಾಯಗಳು ವ್ಯಕ್ತವಾಗಿವೆ.
ಕಾಡಿನಲ್ಲಿ ಸಂಭವಿಸಿರುವಂತಹ ಅಗ್ನಿ ಅವಘಡ ಭಾರಿ ಪ್ರಮಾಣದ ಕಾಡ್ಗಿಚ್ಚು ಹಿಂದೆ ಉದ್ದೇಶಪೂರ್ವಕ ಕೃತ್ಯವಿದೆಯೇ ಎಂಬ ಸಂಶಯ ಮೂಡಿದೆ. ಅರಣ್ಯಕ್ಕೆ ಯಾರಾದರೂ ಜಾಣ್ಮೆಯಿಂದ ಬೆಂಕಿ ಹಚ್ಚಿದರೋ, ಅಥವಾ ಬಿದಿರುಗಳು ಮಧ್ಯೆ ಘರ್ಷಣೆ ಉಂಟಾಗಿ ಸ್ವಯಂ ಪ್ರೇರಿತವಾಗಿ ಬೆಂಕಿ ಹೊತ್ತಿಕೊಂಡಿತೋ ಆರಂಭಿಸಿದೆ.
ಚಳಿಗಾಲದಲ್ಲೇ ಇಷ್ಟೊಂದು ವ್ಯಾಪಕ ಪ್ರಮಾಣದಲ್ಲಿ ಕಾಡಿಗೆ ಹೆಚ್ಚು ಹರಡಿರುವುದು ಅಸಾಮಾನ್ಯವಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ನಿಖರ ಕಾರಣ ತಿಳಿದು ಬರುವವರೆಗೂ ಅಗ್ನಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದ್ದು ಪರಿಸ್ಥಿತಿ ಮೇಲೆ ನಿರಂತರ ನಿಗಾ ವಹಿಸಲಾಗಿದೆ.
ಇನ್ನಷ್ಟು ಓದಿರಿ:
ನನ್ನ ಜೀವ ಇರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ