belagavi news:
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 2026ರ UGC NET ಪರೀಕ್ಷೆಗೆ ಆನ್ಲೈನ್ ನೋಂದಣಿ ಪ್ರಕ್ರಿಯೆಯನ್ನು ಏಪ್ರಿಲ್ 29ರಿಂದ ಆರಂಭಿಸಿದೆ. ಈ ಪರೀಕ್ಷೆ ಜೂನ್ 22ರಿಂದ 30ರವರೆಗೆ ನಡೆಯಲಿದೆ. UGC NET ಪರೀಕ್ಷೆಯು ಸಹಾಯಕ ಪ್ರಾಧ್ಯಾಪಕ ಹುದ್ದೆ ಮಹಾಗು ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಗೆ ಅರ್ಹತೆ ನೀಡುತ್ತದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ. 55 ಅಂಕ ಪಡೆದ ಅಭ್ಯರ್ಥಿಗಳು ಅರ್ಹರಾಗಿದ್ದಾರೆ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಇದೇ ರೀತಿ ನಾಲ್ಕು ವರ್ಷದ ಪದವಿ ಹೊಂದಿರುವ ಅಭ್ಯರ್ಥಿಗಳಿಗೂ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು NTA ತಿಳಿಸಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಆನ್ಲೈನ್ ಮೂಲಕ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ.
ಭಾರತೀಯ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮಹತ್ವದ ಸುದ್ದಿ ನೀಡಿದೆ. ಜೂನ್ 2026ರ ಸಾಲಿನ ಯುಜಿಸಿ ನೆಟ್ ಪರೀಕ್ಷೆಗೆ ಆನ್ಲೈನ್ ನೊಂದಣಿ ಪ್ರಕ್ರಿಯೆಯು ಎಪ್ರಿಲ್ 29 ರಿಂದ ಅಧಿಕೃತವಾಗಿ ಆರಂಭವಾಗಿದೆ.
ಪರೀಕ್ಷಾ ವಿಧಾನ ಮತ್ತು ವೇಳಾಪಟ್ಟಿ: ಈ ಬಾರಿ ಜೂನ್ 27ರಿಂದ ಜೂನ್ 30ರವರೆಗೆ ದೇಶಾದ್ಯಂತ ಒಟ್ಟು 85 ವಿಷಯಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಯನ್ನು ವಿವಿಧ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ನಡೆಸಲಾಗುವುದು. ಅಭ್ಯರ್ಥಿಗಳು ಕೇವಲ ಅಧಿಕೃತ ವೆಬ್ಸೈಟ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು NTA ಸ್ಪಷ್ಟಪಡಿಸಿದೆ. ಬೇರೆ ಯಾವುದೇ ಮಾಧ್ಯಮ ಅಥವಾ ವಿಧಾನಗಳ ಮೂಲಕ ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೂಡ ತಿಳಿಸಲಾಗಿದೆ. ಆಸಕ್ತಿ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕೃತ ಸೂಚನೆಗಳನ್ನು ಅನುಸರಿಸಲು ಸೂಚಿಸಲಾಗಿದೆ.
ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್ JRF ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹತೆಯನ್ನು ನಿರ್ಧರಿಸಲು UGC NET ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುತ್ತದೆ ಜೊತೆಗೆ ಪಿ ಎಚ್ ಡಿ ಪ್ರವೇಶಕ್ಕೂ ಈ ಪರೀಕ್ಷೆಯ ಅಂಕಗಳು ಅತ್ಯಂತ ಮಹತ್ವವುಳ್ಳವುಗಳಾಗಿವೆ.
ಈ ಪರೀಕ್ಷೆಯ ಮೂಲಕ ಅಭ್ಯರ್ಥಿಗಳು ಶೈಕ್ಷಣಿಕ ಹಾಗೂ ಸಂಶೋಧನಾ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲಾಗುತ್ತದೆ. ದೇಶಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸುತ್ತಾರೆ. ಕಳೆದ ಡಿಸೆಂಬರ್ ೨೦೨೫ರ ಪರೀಕ್ಷೆಯಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಅವರಲ್ಲಿ 1.76 ಲಕ್ಷ ಅಭ್ಯರ್ಥಿಗಳು JRF ಹಾಗೂ ಪಿಎಚ್ಡಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದರೂ ಎಂದು NTA ಮಾಹಿತಿ ನೀಡಿದೆ.
ಈ ಪರೀಕ್ಷೆಗೆ ಹಾಜರಾಗಳು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು, ಆದರೆ ಮೀಸಲಾತಿ ವರ್ಗದವರಿಗೆ ಇಂದು ಶೇ. 50 ಆಗಿರುತ್ತದೆ. ಪ್ರಸ್ತುತ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ಓದುತ್ತಿರುವ ಅಥವಾ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಸಹ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಇತ್ತೀಚಿನ ಬದಲಾವಣೆಯ ಪ್ರಕಾರ 4 ವರ್ಷಗಳ ಅಥವಾ ಎಂಟು ಸೆಮಿಸ್ಟರ್ಗಳ ಪದವಿ ಶಿಕ್ಷಣವನ್ನು ಕನಿಷ್ಠ ಶೇ.75 ಅಂಕಗಳೊಂದಿಗೆ ಪೂರೈಸಿದ ಅಭ್ಯರ್ಥಿಗಳು UGC NET ಪರೀಕ್ಷೆಗೆ ನೇರವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ. ಜೊತೆಗೆ ಅಂತಿಮ ಸೆಮಿಸ್ಟರ್ ಅಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಹೊಸ ನಿಯಮ ಮಾನವಿಕ, ಸಮಾಜ ವಿಜ್ಞಾನ, ಭಾಷೆಗಳು ಹಾಗೂ ಕಂಪ್ಯೂಟರ್ ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಿದೆ. ಇದರ ಮೂಲಕ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಮುಂದುವರಿಯಲು ಆಸಕ್ತ ಅಭ್ಯರ್ಥಿಗಳಿಗೆ ಮತ್ತಷ್ಟು ದಾರಿಗಳು ತೆರೆಯಲಾಗಿದೆ.
Also Read: