<?= $pageTitle ?>
Logo
ಮುಖಪುಟ ಓದುವುದು ಕೇಳು
Corporate

ಬ್ಯಾಂಕ್ ಉದ್ಯೋಗವಕಾಶ: ಚಾರ್ಟರ್ಡ್ ಸಹಕಾರಿ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮತ್ತು ಡೈವರ್ ನೇಮಕಾತಿ

ಬ್ಯಾಂಕ್ ಉದ್ಯೋಗವಕಾಶ: ಚಾರ್ಟರ್ಡ್ ಸಹಕಾರಿ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮತ್ತು ಡೈವರ್ ನೇಮಕಾತಿ
Summary: Chartered Co-op Bank Recruitment 2026: ಚಾರ್ಟರ್ಡ್ ಸಹಕಾರಿ ಬ್ಯಾಂಕಿನಲ್ಲಿ ಉದ್ಯೋಗ ಮಾಡಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಲಭ್ಯವಾಗಿದೆ. ಬ್ಯಾಂಕ್ ವತಿಯಿಂದ ಜೂನಿಯರ್ ಅಸಿಸ್ಟೆಂಟ್ ಹಾಗೂ ಡೈವರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು, ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರ ನಿಯಮಗಳನ್ನು ಪೂರೈಸಿದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.
belagavi news:
ಈ ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿ ಕುರಿತು ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ, ಸಂಬಳ ವಿವರ, ಅರ್ಜಿ ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿ ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬೇಕು. ಬ್ಯಾಂಕ್ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಂದು ಉತ್ತಮ ಅವಕಾಶವಾಗಿದ್ದು ಆಸಕ್ತರು ಈ ಅವಕಾಶವನ್ನು ತಪ್ಪಿಸಿಕೊಳ್ಳದೆ ಅರ್ಜಿ ಸಲ್ಲಿಸಬಹುದು.

ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿ 2026:

ಚಾರ್ಟರ್ಡ್ ಸಹಕಾರಿ ಬ್ಯಾಂಕ್ 2026ರ ಸಾಲಿನ ಜೂನಿಯರ್ ಅಸಿಸ್ಟೆಂಟ್ ಹಾಗೂ ಡೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿ ಸಿದೆ. ಒಟ್ಟು 9 ಖಾಲಿ ಹುದ್ದೆಗಳ ಭರ್ತಿ ನಡೆಯಲಿದ್ದು ಈ ನೇಮಕಾತಿ ಬೆಂಗಳೂರಿನಲ್ಲಿ ನಡೆಯಲಿದೆ.
ಈ ಬ್ಯಾಂಕ್ ಉದ್ಯೋಗಕ್ಕೆ 10ನೇ ತರಗತಿ ಪದವಿ ಬಿಕಾಂ ಎಂಕಾಂ ಅಥವಾ ಎಂಬಿಎ ಪೂರ್ವಗೊಳಿಸಿದ್ದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಫೆಬ್ರವರಿ 18 ಯೋಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಸರ್ಕಾರಿ ವಲಯದಂತೆಯೇ ಭದ್ರತೆ ಹೊಂದಿರುವ ಸಹಕಾರಿ ಬ್ಯಾಂಕ್ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಂದು ಅತ್ಯುತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ, ವೇತನ ವಿವರ ಮತ್ತು ಈ ತರ ನಿಯಮಗಳ ಕುರಿತು ಸಂಪೂರ್ಣ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವಂತೆ ಸಲಹೆ ನೀಡಲಾಗುತ್ತದೆ.

ಬೆಂಗಳೂರು ಹಾಗೂ ಕರ್ನಾಟಕ ಸರ್ಕಾರದ ವಲಯದಲಿ ಭದ್ರ ಮತ್ತು ಗೌರವಯುತ ವೃತ್ತಿ ಜೀವನವನ್ನು ಕನಸು ಕಾಣುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ. ಚಾರ್ಟರ್ಡ್ ಸಹಕಾರಿ ಬ್ಯಾಂಕಿ 2026ರ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಜೂನಿಯರ್ ಅಸಿಸ್ಟೆಂಟ್ ಮತ್ತು ಡೈವರ್ ಹುದ್ದೆಗಳ ಬರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಈ ನೇಮಕಾತಿ ಪ್ರಕ್ರಿಯೆ ಮೂಲಕ ವಟ್ಟು 9 ಖಾಲಿ ಹುದ್ದೆಗಳು ಭರ್ತಿಯಾಗಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುವ ಅವಕಾಶ ಲಭ್ಯವಾಗಲಿದೆ. ಸಹಕಾರಿ ಬ್ಯಾಂಕ್ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಂದು ಉತ್ತಮ ಅವಕಾಶವಾಗಿದೆ.

ಆಸಕ್ತ ಅಭ್ಯರ್ಥಿಗಳು ಅಗತ್ಯ ಅರ್ಹತೆ ಹಾಗೂ ನಿಯಮಗಳನ್ನು ಪೂರೈಸಿದಲ್ಲಿ ಫೆಬ್ರವರಿ 18ಯೊಳಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸುವ ವಿಧಾನ ಆಯ್ಕೆ ಪ್ರಕ್ರಿಯೆ ವೇತನ ವಿವರ ಹಾಗೂ ಇತರ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.

ಶೈಕ್ಷಣಿಕ ಅರ್ಹತೆ:
ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿ 2026ಕ್ಕೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಶೈಕ್ಷಣಿಕ ಅರ್ಹತೆಗಳನ್ನು ಕಡ್ಡಾಯವಾಗಿ ಪೂರೈಸಬೇಕು. ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪದವಿ ಬಿಕಾಂ ಎಂಕಾಂ ಅಥವಾ ಎಂಬಿಎ ಪೂರ್ಣಗೊಳಿಸಿರಬೇಕು.

ಈ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಜೂನಿಯರ್ ಅಸಿಸ್ಟೆಂಟ್ ಹಾಗೂ ಡೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹರಾಗಿರುತ್ತಾರೆ.

ವಯಸ್ಸಿನ ಮಿತಿ:
ಚಾರ್ಟರ್ಡ್ ಸಹಕಾರಿ ಬ್ಯಾಂಕ್ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿ ಈ ಕೆಳಗಿನಂತಿದೆ:
ಕನಿಷ್ಠ ವಯಸ್ಸು: 18 ವರ್ಷ ಗರಿಷ್ಠ ವಯಸ್ಸು: 40 ವರ್ಷ
ಸರ್ಕಾರದ ನಿಯಮ ಅನುಸಾರ ವರ್ಗವಾರು ವಯಸ್ಸಿನ ಸಡಿಲಿಕೆಗಳು ಅನ್ವಯವಾಗುವ ಸಾಧ್ಯತೆ ಇದ್ದು ಅದರ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವುದು ಸೂಕ್ತ.

ಅರ್ಜಿ ಸಲ್ಲಿಸುವ ವಿಧಾನ:
ಅರಾಗು ಆಸೆಪ್ಟ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು ಭರ್ತಿಗೊಂಡ ಅರ್ಜಿ ನಮೋನೆಯನ್ನು ಅಗತ್ಯವಿರುವ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಕೆಳಗಿನ ವಿಲಾಸಿಕೆ ಕಳುಹಿಸಬೇಕು.

ಚಾರ್ಟರ್ಡ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಂ-1, 1ನೇ ಮುಖ್ಯ ರಸ್ತೆ 1ನೇ ಬ್ಲಾಕ್, ಕೋರಮಂಗಲ, ಬೆಂಗಳೂರು -560034.

ಅರ್ಜಿ ಸಲ್ಲಿಸುವ ವಿಧಾನ: ಹಂತವಾರು ಮಾಹಿತಿ:

ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿ 2026ಕ್ಕೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಕಡ್ಡಾಯವಾಗಿ ಅನುಸರಿಸಬೇಕು.

ಮೊದಲು ಚಾರ್ಟರ್ಡ್ ಸಹಕಾರಿ ಬ್ಯಾಂಕ್ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ ಹಾಗೂ ಇತರ ಅರ್ಹತೆ ಮಾನದಂಡಗಳನ್ನು ಪೂರೈಸುತ್ತಿರುವುದನ್ನು ಖಚಿತಪಡಿಸಿಕೊಳ್ಳಿ.

ಅರ್ಜಿ ಸಲ್ಲಿಸುವ ಮೊದಲು ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಸಿದ್ಧವಾಗಿಟ್ಟುಕೊಳ್ಳಿ. ಜೊತೆಗೆ ವಯಸ್ಸಿನ ಪ್ರಮಾಣ ಪತ್ರ ಶೈಕ್ಷಣಿಕ ದಾಖಲೆಗಳು, ಐಡಿ ಪ್ರೂಫ್, ಇತ್ತೀಚಿನ ಪಾಸ್ ಪೋರ್ಟ್ ಗಾತ್ರದ ಛಾಯಾಚಿತ್ರ, ರೆಸ್ಯೂಮ್ ಹಾಗೂ ಅನುಭವ ಪ್ರಮಾಣ ಪತ್ರಗಳು (ಇದ್ದಲ್ಲಿ) ಸಿದ್ಧಪಡಿಸಿಕೊಳ್ಳಬೇಕು.

ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಿಗದಿತ ನಮೋನೆಯಲ್ಲಿ ಅಗತ್ಯ ಮಾಹಿತಿಯನ್ನು ಸರಿಯಾದ ಭರ್ತಿ ಮಾಡಿ.

ಅರ್ಜಿ ಶುಲ್ಕ ಅನ್ವಯಿಸಿದಲ್ಲಿ ನಿಮ್ಮ ವರ್ಗದ ಪ್ರಕಾರ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸುವ ಮೊದಲು ಭರ್ತಿ ಮಾಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸುವುದು ಅತ್ಯಂತ ಮುಖ್ಯ.

ಅಂತಿಮವಾಗಿ ಸಂಪೂರ್ಣವಾಗಿ ಬರ್ತಿಗೊಂಡ ಅರ್ಜಿಯನ್ನು ಅಧಿಸೂಚನೆಯಲ್ಲಿ ನೀಡಿರುವ ನಿಗದಿತ ವಿಲಾಸಕ್ಕೆ ರಿಜಿಸ್ಟರ್ ಪೋಸ್ಟ್ / ಸ್ಪೀಡ್ ಪೋಸ್ಟ್ ಅಥವಾ ಯಾವುದೇ ವಿಶ್ವಾಸಾರ್ಹ ಅಂಚೆ ಸೇವೆಯ ಮೂಲಕ ಕಳುಹಿಸಿ.

ಸರ್ಕಾರಿ ವಲಯದಂತೆಯೇ ಭದ್ರತೆ ಹೊಂದಿರುವ ಸಹಕಾರಿ ಬ್ಯಾಂಕ್ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಂದು ಉತ್ತಮ ಅವಕಾಶವಾಗಿದ್ದು, ಅರ್ಹರಾಗಿರುವವರು ಕೊನೆಯ ದಿನಾಂಕದೊಳಗೆ ತಪ್ಪದೇ ಅರ್ಜಿ ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಇನ್ನಷ್ಟು ಓದಿರಿ:
ನ್ಯಾಯಯುತ ತೆರಿಗೆ ಪಾಲು ಮತ್ತು ಸಮಾನ ಸಂಪನ್ಮೂಲ ಹಂಚಿಕೆ ಅಗತ್ಯ – ಸದೃಢ ಒಕ್ಕೂಟಕ್ಕೆ ಸಿಎಂ ಒತ್ತಾಯ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online