<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಕೃಷ್ಣಾ ನದಿಗೆ ಬಸವಸಾಗರ ನೀರು ಬಿಡುಗಡೆ : ರೈತರ ಮುಖದಲ್ಲಿ ಮಂದಹಾಸ

ಕೃಷ್ಣಾ ನದಿಗೆ ಬಸವಸಾಗರ ನೀರು ಬಿಡುಗಡೆ : ರೈತರ ಮುಖದಲ್ಲಿ ಮಂದಹಾಸ
Summary: Water has been released from Basavasagar reservoir into Krishna river. It is beneficial for irrigation and has brought happiness to farmers on the banks of Krishna river. Read the complete information.

Belagavi News:

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ, ಆಲಮಟ್ಟಿ ಜಲಾಶಯಕ್ಕೆ ನೀರಿನ ಒಳಹರಿವುಗಳನೀಯವಾಗಿ ಹೆಚ್ಚಿದ್ದು, ಜಲಾಶಯ ಭರ್ತಿಯತ್ತ ಸಾಗುತ್ತಿದೆ. ಇದೇ ವೇಳೆ ಬಸವ ಸಾಗರ ಜಲಾಶಯವು ತುಂಬಿರುವ ಹಿನ್ನೆಲೆಯಲ್ಲಿ, ಡ್ಯಾಮ್ ನಿಂದ ಕೃಷ್ಣಾ ನದಿಗೆ 30 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಭಾರಿ ಮಳೆಯಿಂದ ಕೃಷ್ಣ ಕಣಿವೆಯ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ವರದಿಗಳಿವೆ.

ಈ ಹಿನ್ನೆಲೆಯಲ್ಲಿ, ರಾಯಚೂರು ತಾಲೂಕಿನ ಗುರ್ಜಾಪುರದಲ್ಲಿರುವ ಬ್ರಿಡ್ಜ್ - ಕಂ- ಬ್ಯಾರೇಜ್ ನ 196 ಗೇಟ್ ಗಳನ್ನು ತೆರೆಯುವ ಕಾರ್ಯ ಬರದಿಂದ ನಡೆಯುತ್ತಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಗೇಟ್ಗಳನ್ನು ಹಂತ ಹಂತವಾಗಿ ತೆರೆಯಲಾಗುತ್ತಿದ್ದು, ಹೆಚ್ಚುವರಿ ನೀರನ್ನು ಸುರಕ್ಷಿತವಾಗಿ ಹರಿ ಬಿಡಲಾಗುತ್ತಿದೆ.

ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಹಾಗೂ ರೈತರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಅನಗತ್ಯವಾಗಿ ನದಿ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಆರ್ ಟಿಪಿಎಸ್ ಬ್ಯಾರೇಜ್ ನ 196 ಗೇಟ್ ಗಳ ತೆರೆಯುವಿಕೆ ಆರಂಭ - ಗುರ್ಜಾಪುರ, ಮರಚೇಣಿಗೆ ಗ್ರಾಮಗಳಿಗೆ ಈ ನೀರಿನ ಆತಂಕ ತಪ್ಪಿಸಲು ಕ್ರಮ :

ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಯಚೂರು ತಾಪ ವಿದ್ಯುತ್ ಸ್ಥಾವರ ವಿದ್ಯುತ್ ಉತ್ಪಾದನಾ ಘಟಕಕ್ಕೆ ಸೇರಿದ ಗುರ್ಜಾಪುರ ಬ್ರಿಡ್ಜ್ - ಕಂ- ಬ್ಯಾರೇಜ್ ನ 196 ಗೇಟ್ಗಳನ್ನು ತೆರೆಯುವ ಕಾರ್ಯ ಬರದಿಂದ ಸಾಗುತ್ತದೆ. ಬ್ಯಾರೇಜ್ ನ ಡೇಟ್ ಗಳನ್ನು ತೆರೆಯುವುದರಿಂದ ಹಿನ್ನೀರಿನ ಸಂಗ್ರಹವನ್ನು ನಿಯಂತ್ರಿಸಿ, ಕೃಷ್ಣಾ ನದಿಯಲ್ಲಿ ನೀರು ಸುಗಮವಾಗಿ ಹರಿಯುವಂತೆ ಮಾಡಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಹಿನ್ನಿರಿನ ಮಟ್ಟ ಏರಿಕೆಯಿಂದ ಗುರ್ಜಾಪುರ, ಮರಚಣೆಗೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಪ್ರವಾಹದ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕೆಗಳನ್ನು ಹಂತ ಹಂತವಾಗಿ ತೆರೆಯಲಾಗುತ್ತಿದೆ. ಈಗಾಗಲೇ ಸಿಬ್ಬಂದಿ ನೂರಕ್ಕೂ ಹೆಚ್ಚು ಗೇಟ್ ಗಳನ್ನು ತೆರೆದು, ಹೆಚ್ಚುವರಿ ನೀರನ್ನು ಸುರಕ್ಷಿತವಾಗಿ ನದಿಗೆ ಹರಿಬಿಡುವ ಕಾರ್ಯದಲ್ಲಿ ತೊಡಗಿದ್ದಾರೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ನದಿಯಲ್ಲಿ ನೀರಿನ ಪ್ರಮಾಣವು ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಬ್ಯಾರೇಜ್ ನಲ್ಲಿ ಹಿನ್ನಿರು ಸಂಗ್ರಹವಾಗದಂತೆ ನೋಡಿಕೊಳ್ಳಲು ಮತ್ತು ನದಿ ಪಾತ್ರದ ಗ್ರಾಮಗಳಿಗೆ ಸುರಕ್ಷತೆಯನ್ನು ಖಚಿತ ಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾಡಳಿತ ಮತ್ತು ಸಂಬಂಧಿತ ಅಧಿಕಾರಿಗಳು ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಿದ್ದು, ಪರಿಸ್ಥಿತಿಯ ಮೇಲೆ ನಿರಂತರ ನಿಗಾವಹಿಸಲಾಗಿದೆ.

ಕೃಷ್ಣಾ ನದಿಗೆ ನೀರು ಬಿಡುಗಡೆ - ಬರದಿಂದ ಕಂಗೆಟ್ಟ ರೈತರಿಗೆ ನೆಮ್ಮದಿ, ದೇವರಸೂಗುರು ಸೇರಿ ಕೆಳಬಾಗದ ಗ್ರಾಮಗಳಿಗೆ ಆಶಾಕಿರಣ :

ಭೀಕರ ಬರಗಾಲದಿಂದ ಸಂಕಷ್ಟಕ್ಕೆ ಒಳಗಾಗಿದ್ದ ರಾಯಚೂರು ಜಿಲ್ಲೆಯ ರೈತರಿಗೆ ಕೃಷ್ಣಾ ನದಿಗೆ ನೀರು ಬಿಡುಗಡೆಯಾಗಿರುವುದು ಕೊಂಚ ನಿರಳತೆಯನ್ನು ತಂದಿದೆ. ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳಿಂದ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಚೇತರಿಕೆ ಕಾಣುವ ನಿರೀಕ್ಷೆ ಮೂಡಿದೆ.

ಕೃಷ್ಣ ನದಿಯ ಕೆಳಭಾಗದಲ್ಲಿರುವ ದೇವರ ಸುಗುರು, ಗಂಜಿ ಹಳ್ಳಿ, ಡಿ ರಾಮಪುರ ಸೇರಿದಂತೆ ಹಲವು ಗ್ರಾಮಗಳಿಗೆ ನೀರು ತಲುಪುವ ಭರವಸೆ ವ್ಯಕ್ತವಾಗಿದೆ. ಇದರಿಂದ ನೀರಿನ ಕೊರತೆಯಿಂದ ಸ್ಥಗಿತಗೊಂಡಿದ್ದ ಕೃಷಿ ಕಾರ್ಯಗಳು ಪುನರಾರಂಭವಾಗುವ ಸಾಧ್ಯತೆ ಹೆಚ್ಚಿದ್ದು, ರೈತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಪರಿಸ್ಥಿತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆ ಮತ್ತು ಜಲಾಶಯಗಳಲ್ಲಿ ನೀರಿನ ಭಾವದಿಂದ ರೈತರು ತೀರ ಸಂಕಷ್ಟ ಎದುರಿಸುತ್ತಿದ್ದರು. ಇದೀಗ ನದಿಗೆ ನೀರು ಬಿಡುಗಡೆ ಆಗಿರುವುದರಿಂದ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ದೊರೆಯುವ ನಿರೀಕ್ಷೆ ಹೆಚ್ಚಾಗಿದೆ. ಜೊತೆಗೆ ಅಂತರ್ಜಲ ಮಟ್ಟವು ಸುಧಾರಿಸುವ ಸಾಧ್ಯತೆ ಇದೆ ಎಂದು ರೈತರು ಆಶಾ ಭಾವನೆ ವ್ಯಕ್ತಪಡಿಸಿದ್ದಾರೆ.

ರೈತರು ನೀರನ್ನು ಸಮರ್ಪಕವಾಗಿ ಬಳಸಿ ಬೆಳೆಗಳನ್ನು ರಕ್ಷಿಸಿಕೊಳ್ಳುವಂತೆ ಕೃಷಿ ತಜ್ಞರು ಸಲಹೆ ನೀಡಿದ್ದು, ಜಲಾಶಯಗಳ ಒಳಹರಿವು ಹಾಗೂ ನದಿಯ ನೀರಿನ ಮಟ್ಟದ ಮೇಲೆ ಅಧಿಕಾರಿಗಳು ನಿರಂತರ ನಿಗ ವಹಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online