<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಸಿಎಂ ಸಿದ್ದರಾಮಯ್ಯ : ಮಾನವ ಧರ್ಮವೇ ಎಲ್ಲ ಧರ್ಮಕ್ಕಿಂತಲೂ ಮೇಲು

ಸಿಎಂ ಸಿದ್ದರಾಮಯ್ಯ : ಮಾನವ ಧರ್ಮವೇ ಎಲ್ಲ ಧರ್ಮಕ್ಕಿಂತಲೂ ಮೇಲು
Summary: ರಾಜ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲ ಧರ್ಮಗಳಿಗಿಂತಲೂ ಮಾನವ ಧರ್ಮವೇ ಮೇಲು ಎಂದು ಸ್ಪಷ್ಟವಾಗಿ ಹೇಳಿದರು. ಸಮಾಜದಲ್ಲಿ ಶಾಂತಿ ಸಹ ಬಾಳ್ವೆ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಮಾನವೀಯ ಮೌಲ್ಯಗಳು ಮೂಲ ಎಂದು ಅವರು ಒತ್ತಿ ಹೇಳಿದರು. ಸಿದ್ದರಾಮಯ್ಯನವರು ಹೀಗೆ ಎನ್ನಲು ಕಾರಣವೇನು ನೋಡೋಣ ಬನ್ನಿ..
Belagavi news:

ಧರ್ಮ ಜಾತಿ ಭಾಷೆ ಎಲ್ಲ ಬೇದಗಳಿಗೂ ಮೀರಿದ್ದು ಮಾನವೀಯತೆ, ಸಹಾನುಭೂತಿ ಮತ್ತು ಸಮಾನತೆ ನಮ್ಮ ಸಮಾಜವನ್ನು ಒಂದಾಗಿಸುವ ಶಕ್ತಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಜನರ ಪರಸ್ಪರ ಗೌರವದಿಂದ ಬದುಕಿದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.


ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಸಿಕೊಳ್ಳುಲು ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶಿಕ್ಷಣದಿಂದ ಮಾತ್ರ ವ್ಯಕ್ತಿಗೆ ನಿಜವಾದ ಸ್ವಾಭಿಮಾನ ಮತ್ತು ಆತ್ಮ ಗೌರವ ದೊರೆಯುತ್ತದೆ. ಆದ್ದರಿಂದ ಶಿಕ್ಷಣವೇ ಅತ್ಯಂತ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಅವರು ರಾಜ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ ಶಿಕ್ಷಣವೇ ಸಮಾಜದ ಬದಲಾವಣೆಗೆ ಮೂಲ ಶಕ್ತಿ ಎಂದು ಹೇಳಿದರು.


ಶಿಕ್ಷಣ ಇಲ್ಲದೆ ಸಮಾನತೆ ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಶಿಕ್ಷಣದ ಮೂಲಕ ವ್ಯಕ್ತಿ ತನ್ನ ಹಕ್ಕುಗಳನ್ನು ಅರಿತುಕೊಳ್ಳುತ್ತಾನೆ, ಸಮಾಜದಲ್ಲಿ ಗೌರವಯುತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಎಲ್ಲ ವರ್ಗಗಳಿಗೂ ಸಮಾನ ಶಿಕ್ಷಣದ ಅವಕಾಶ ದೊರೆಯಬೇಕು ಎಂದು ಒತ್ತಾಯಿಸಿದ ಸಿದ್ದರಾಮಯ್ಯ, ಸರ್ಕಾರವು ಬಡ ಮತ್ತು ಹಿಂದುಳಿದ ವರ್ಗದ ಮಕ್ಕಳಿಗೆ ಶಿಕ್ಷಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಶಿಕ್ಷಣ ಪಡೆದ ಯುವಶಕ್ತಿ ದೇಶದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡುತ್ತದೆ ಎಂದು ಸ್ಪಷ್ಟಪಡಿಸಿದರು.


ಶಿಕ್ಷಣವೇ ವ್ಯಕ್ತಿಯ ಸ್ವಾಭಿಮಾನ ಸಮಾಜದ ಶಕ್ತಿ ಮತ್ತು ರಾಷ್ಟ್ರದ ಭವಿಷ್ಯ ಎಂದು ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.


ದಯೆ ಧರ್ಮದ ಮೂಲ ದಯವಿಲ್ಲದೆ ಧರ್ಮವೇ ಇಲ್ಲ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು ಎಂದು ಅವರು ಪ್ರತಿಪಾದಿಸಿದರು.


ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ನಡೆದ 'ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ' ಕುರಿತು ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ನಾವೆಲ್ಲರೂ ಮೊದಲಿಗೆ ಮನುಷ್ಯರು.ಯಾವುದೇ ಧರ್ಮವು ದ್ವೇಷ ಕಲಿಸುವುದಿಲ್ಲ,ಪರಸ್ಪರ ಪ್ರೀತಿ ಮತ್ತು ಸಹ ಬಾಳ್ವೆ ಕಲಿಸುತ್ತದೆ ಮಾನವೀಯತೆ ಸಮಾಜಕ್ಕೆ ನಾವು ನೀಡುವ ಅತ್ಯಂತ ದೊಡ್ಡ ಕೊಡುಗೆಯನ್ನು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.


ಶಿಕ್ಷಣದಿಂದ ವ್ಯಕ್ತಿತ್ವ ಮತ್ತು ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ. ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಸಿಕೊಳ್ಳಲು ಸಾಧ್ಯವಾಗುವುದರಿಂದ ಶಿಕ್ಷಣವೇ ಅತ್ಯಂತ ಮುಖ್ಯ ಎಂದು ಅವರು ಹೇಳಿದರು. ಒಂದು ಕಾಲದಲ್ಲಿ ಶೇಕಡ 75ರಷ್ಟು ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಇದನ್ನು ಅರಿತು ಮಠಗಳು ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿರುವುದು ಶ್ಲಾಘನೀಯ ಎಂದು ಸಿದ್ದರಾಮಯ್ಯ ತಿಳಿಸಿದರು.


ಮಾನವೀಯತೆ ಶಿಕ್ಷಣ ಮತ್ತು ಸಹಬಾಳ್ವೆ ಮೂಲಕವೇ ಶಕ್ತಿಶಾಲಿ ಸಮಾಜ ನಿರ್ಮಾಣ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


ಸುತ್ತೂರು ಮಠಕ್ಕೆ ಸಾವಿರ ವರ್ಷಗಳ ಇತಿಹಾಸವಿದೆ. ಶಿಕ್ಷಣ ಜ್ಞಾನ ಮತ್ತು ಅನ್ನದಾಸೋಹಕ್ಕೆ ಮಹತ್ವ ಇದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದ್ದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿರುವ ಸುತ್ತೂರು ಮಠ ಆರಂಭದಿಂದಲೇ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿಕೊಂಡು ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಧಾರ್ಮಿಕ ಚಟುವಟಿಕೆಗಳ ಜೊತೆಗೆ ಜ್ಞಾನ ವಿಸ್ತಾರ ಹಾಗೂ ಅನ್ನದಾಸೋಹಕ್ಕೆ ಮಹತ್ವ ನೀಡುವ ಸುತ್ತೂರು ಮಠವು ಸಮಾಜ ನಿರ್ಮಾಣದಲ್ಲಿ ಅಪಾರ ಕೊಡುಗೆ ನೀಡಿದೆ ಎಂದು ಅವರು ಶ್ಲಾಘಿಸಿದರು.


ಕಾರ್ಯಕ್ರಮದ ಅಂಗವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕನಕಪುರ ದೇಗುಲ ಮಠದ ಚನ್ನಬಸವ ಸ್ವಾಮೀಜಿ, ಸಚಿವರಾದ ಡಾ. ಎಚ್.ಸಿ ಮಹದೇವಪ್ಪ, ಡಾ. ಎಂ.ಸಿ ಸುಧಾಕರ್, ಶರಣಪ್ರಕಾಶ್ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ರವಿಶಂಕರ್, ಗಣೇಶ್ ಪ್ರಸಾದ್, ಎ. ಆರ್. ಕೃಷ್ಣಮೂರ್ತಿ, ಯಶವಂತ್ ಪಾಟೀಲ್, ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ, ವಿಭಾಗೀಯ ಉಪಾಧ್ಯಕ್ಷೇ ಪುಷ್ಪ ಅಮರನಾಥ್, ಮಹಾದೇವಪ್ಪ ಮುಖಂಡರಾದ ಎಂ.ಕೆ.ಸೋಮಶೇಖರ್, ಆಯುಬ್ ಖಾನ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಸುತ್ತೂರು ಜಾತ್ರಾ ಮಹೋತ್ಸವ ಧರ್ಮ ಶಿಕ್ಷಣ ಅಣ್ಣ ಮತ್ತು ಸಮಾಜ ಸೇವೆ ಸಮನ್ವಯ ಪ್ರತಿಕವಾಗಿದ್ದು ಇದು ಮುಂದಿನ ತಲೆಮಾರಿಗೆ ಆದರ್ಶವಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.



ಇನ್ನಷ್ಟು ಓದಿರಿ:


ಇಂದು ಈ ರಾಶಿಯವರು ಸ್ವಲ್ಪ ಕಡಿಮೆ ಮಾತನಾಡಿ! ಎಚ್ಚರಿಕೆಯ ಜ್ಯೋತಿಷ್ಯ ಸಲಹೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online