ಈ ಕುರಿತು ಎಕ್ಸ್ ಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ ಗ್ರೋಕ್ ಮತ್ತು ಇತರ xAI ಪರಿಕರಗಳಂತಹ ಅದರ AI-ಆಧಾರಿತ ಸೇವೆಗಳ ಮೂಲಕ ಅಶ್ಲೀಲ, ನಗ್ನ, ಅಸಭ್ಯ ಅಥವಾ ಲೈಂಗಿಕವಾಗಿ ಸ್ಪಷ್ಟವಾದ ವಿಷಯವನ್ನು ಹೋಸ್ಟ್ ಮಾಡುವುದು, ರಚಿಸುವುದು ಅಥವಾ ಅಪ್‌ಲೋಡ್ ಮಾಡುವುದರ ವಿರುದ್ಧ ವೇದಿಕೆಗೆ ಎಚ್ಚರಿಕೆ ನೀಡಿದೆ.
ಸಾಮಾಜಿಕ ಮಾಧ್ಯಮ ವೇದಿಕೆ 'ಗ್ರೋಕ್ ಎಐ'ನಲ್ಲಿ ಅಶ್ಲೀಲ, ನಗ್ನ ಮತ್ತು ಅಸಭ್ಯ ವಿಷಯವನ್ನು ವಿತರಿಸಲು ಎಐ ಆಧಾರಿತ ಸೇವೆಯನ್ನು ದುರುಪಯೋಗಪಡಿಸಿಕೊಂಡ ಘಟನೆಗಳ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ನಿಟ್ಟಿನಲ್ಲಿ ತನ್ನ ಕಾನೂನು ಬಾಧ್ಯತೆಗಳನ್ನು ಪಾಲಿಸಲು ವಿಫಲವಾದ ಕಾರಣದಿಂದಾಗಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಎಕ್ಸ್‌ಗೆ ನೋಟಿಸ್ ನೀಡಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ನ ಮುಖ್ಯ ಅನುಸರಣಾ ಅಧಿಕಾರಿಗೆ ಬರೆದ ಪತ್ರದಲ್ಲಿ, ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ಮತ್ತು ಐಟಿ ನಿಯಮಗಳ ಅಡಿಯಲ್ಲಿ ಅದರ ಶಾಸನಬದ್ಧ ಡ್ಯೂ ಡಿಲಿಜೆನ್ಸ್ ಬಾಧ್ಯತೆಗಳನ್ನು ಪಾಲಿಸುವಂತೆ ವೇದಿಕೆಗೆ ನಿರ್ದೇಶನ ನೀಡಿದೆ. ಪಾಲಿಸದಿರುವುದು ಐಟಿ ಕಾಯ್ದೆಯ ಸೆಕ್ಷನ್ 79 ರ ಅಡಿಯಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಳ್ಳಲು ಕಾರಣವಾಗಬಹುದು ಎಂದು ಸಚಿವಾಲಯ ಎಚ್ಚರಿಸಿದೆ, ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಕ್ರಮಕ್ಕೆ ವೇದಿಕೆಯನ್ನು ಹೊಣೆಗಾರರನ್ನಾಗಿ ಮಾಡುತ್ತದೆ ಎಂದೂ ಹೇಳಲಾಗಿದೆ.
‘ಗ್ರೋಕ್’ ನಂತಹ AI ಆಧಾರಿತ ಸೇವೆಗಳ ದುರುಪಯೋಗದ ಮೂಲಕ ಅಶ್ಲೀಲ, ನಗ್ನ, ಅಸಭ್ಯ ಮತ್ತು ಲೈಂಗಿಕತೆಯುಳ್ಳ ಕಟೆಂಟ್ ಗಳನ್ನು ಹೋಸ್ಟ್ ಮಾಡುವುದು, ಸೃಷ್ಟಿಸುವುದು, ಪ್ರಕಟಿಸುವುದು, ಪ್ರಸಾರ ಮಾಡುವುದು, ಹಂಚಿಕೊಳ್ಳುವುದು ಅಥವಾ ಅಪ್‌ಲೋಡ್ ಮಾಡುವುದನ್ನು ತಡೆಗಟ್ಟಲು ತಕ್ಷಣ ಕ್ರಮ ಕೈಗೊಂಡು ವರದಿಯನ್ನು ಸಲ್ಲಿಸಬೇಕೆಂದು ಸಚಿವಾಲಯ ಕೋರಿದೆ.
“ನೀವು ಅಭಿವೃದ್ಧಿಪಡಿಸಿದ ಮತ್ತು ಸಂಯೋಜಿಸಲ್ಪಟ್ಟ ಮತ್ತು ಎಕ್ಸ್ ವೇದಿಕೆಯಲ್ಲಿ ಲಭ್ಯವಾಗುವಂತೆ ಮಾಡಲಾದ “Grok AI” ಎಂಬ ಸೇವೆಯನ್ನು ಬಳಕೆದಾರರು ಮಹಿಳೆಯರ ಅಶ್ಲೀಲ ಚಿತ್ರಗಳು ಅಥವಾ ವೀಡಿಯೊಗಳನ್ನು ಅವಹೇಳನಕಾರಿ ಅಥವಾ ಅಸಭ್ಯ ರೀತಿಯಲ್ಲಿ ಹೋಸ್ಟ್ ಮಾಡಲು, ರಚಿಸಲು, ಪ್ರಕಟಿಸಲು ಅಥವಾ ಹಂಚಿಕೊಳ್ಳಲು ನಕಲಿ ಖಾತೆಗಳನ್ನು ರಚಿಸಲು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ವಿಶೇಷವಾಗಿ ಗಮನಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಂಡು ವರದಿ ಸಲ್ಲಿಸಿ” ಎಂದು ಪತ್ರದಲ್ಲಿ ಆದೇಶಿಸಲಾಗಿದೆ.
ಇನ್ನಷ್ಟು ಓದಿರಿ: ಛತ್ತೀಸ್‌ಗಢ ಮದ್ಯದ ಹಗರಣ: ಕೋರ್ಟ್ ನಿಂದ ಜಾಮೀನು