ಎ.ಪಿ.ಅರ್ಜುನ್ ಫಿಲ್ಮ್ ಬ್ಯಾನರ್ನಡಿ ಮೂಡಿ ಬರುತ್ತಿರುವ ಚಿತ್ರಕ್ಕೆ ವಿಜಯ್ ಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಬಹುತೇಕ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡಿದೆ. ಹೀಗಿದ್ದರೂ ಚಿತ್ರತಂಡ ನಾಯಕಿ ಪರಿಚಯ ಮಾಡಿರಲಿಲ್ಲ. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಗಿತ್ತು.
ಇತ್ತೀಚೆಗೆ ಲಕ್ಷ್ಮಿಪುತ್ರನಿಗೆ ಜೋಡಿ ಯಾರು ಅನ್ನೋದು ರಿವೀಲ್ ಆಗಿದೆ.
ಚಿತ್ರದಲ್ಲಿ ತಾರಾ, ಕುರಿ ಪ್ರತಾಪ್, ಧರ್ಮಣ್ಣ ಸೇರಿ ದೊಡ್ಡ ತಾರಾಗಣವಿದೆ. ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ಎ.ಪಿ.ಅರ್ಜುನ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ತಾಯಿ ಮಗನ ಬಾಂಧವ್ಯದ ಕಥೆಯನ್ನು ಹೇಳುವ ಪ್ರಯತ್ನದಲ್ಲಿ ಲಕ್ಷ್ಮಿಪುತ್ರ ತಂಡವಿದೆ.
ಲಕ್ಷ್ಮಿಪುತ್ರ ಚಿಕ್ಕಣ್ಣನಿಗೆ ಹೊಸ ನಟಿ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. ಅವರೇ ವಂದಿತಾ. ಸ್ಪೆಷಲ್ ಪ್ರೋಮೋ ಬಿಡುಗಡೆ ಮಾಡಿರುವ ಚಿತ್ರತಂಡ ವಂದಿತಾ ಅವರನ್ನು ತಮ್ಮ ಬಳಗಕ್ಕೆ ಸ್ವಾಗತ ಮಾಡಿಕೊಂಡಿದೆ.
ಎ.ಪಿ.ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರವಿಕಿರಣ್ ಗೌಡ ಸಹ-ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ. ಚಿತ್ರದ ಆ್ಯಕ್ಷನ್ ಸೀಕ್ವೆನ್ಸ್‌ಗಳಿಗೆ ಮಾಸ್ ಮಾದ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್.ಗೌಡ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ವಿಭಿನ್ನ ಕಾಮಿಡಿಯಿಂದಲೇ ಕನ್ನಡ ಚಿತ್ರರಂಗದಲ್ಲಿ ಬೇಡಿಕೆ ಹೊಂದಿರುವ ನಟ ಚಿಕ್ಕಣ್ಣ. ಉಪಾಧ್ಯಕ್ಷ ಚಿತ್ರದ ಬಳಿಕ ಚಿಕ್ಕಣ್ಣನ ಯಾವ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಚಿಕ್ಕಣ್ಣ ಮತ್ತೆ ಹೀರೋ ಆಗಿ ನಟಿಸುತ್ತಿರುವ ಚಿತ್ರದ ಶೀರ್ಷಿಕೆ 'ಲಕ್ಷ್ಮಿಪುತ್ರ'. ಇದು ಚಿಕ್ಕಣ್ಣ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿರುವ 2ನೇ ಸಿನಿಮಾ.
ಇನ್ನಷ್ಟು ಓದಿರಿ:
ಮಹೀಂದ್ರಾ ಹೊಸ ಎಸ್ಯುವಿ: ಕ್ಯಾಮೆರಾ ಜೊತೆ ಲಾಂಚ್