<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಮೀಸಲಾತಿ ಮಿತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಿ: ಹೈಕೋರ್ಟ್ ಆದೇಶ

ಮೀಸಲಾತಿ ಮಿತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಿ: ಹೈಕೋರ್ಟ್ ಆದೇಶ
Summary: ನೇಮಕಾತಿ ಪ್ರಕ್ರಿಯೆಯಲ್ಲಿ ಶೇ.50 ಮೀಸಲಾತಿ ನಿಯಮವನ್ನು ಕಟ್ಟುನಿಟ್ಟಾಗಿ ಅನ್ವಯಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಫಸ್ಟ್ ಸೂಚನೆ ನೀಡಿದೆ. ತೀರ್ಪಿನ ಸಂಪೂರ್ಣ ವಿವರ ಇಲ್ಲಿದೆ ನೋಡಿ..
Belagavi news:

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಅಂತಿಮ ಆದೇಶ ಬರುವವರೆಗೂ ಶೇ. 50 ಮೀಸಲಾತಿ ಮಿತಿಯನ್ನೇ ಅನುಸರಿಸಬೇಕು ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿ, ನೇಮಕಾತಿ ಪ್ರಕ್ರಿಯೆಗಳನ್ನು ಶೇ. 50 ಮೀಸಲಾತಿ ನಿಯಮದಂತೆ ನಡೆಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.


ಪ್ರಸ್ತುತ ಜಾರಿಯಲ್ಲಿರುವ ಶೇ. 50ರ ಮೀಸಲಾತಿ ನಿಯಮದ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಆದರೆ, ಮೀಸಲಾತಿ ಪ್ರಮಾಣವನ್ನು ಶೇ.56 ಕ್ಕೆ ಹೆಚ್ಚಿಸಿರುವ ಕಾಯಿದೆಯಂತೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲು ಅವಕಾಶವಿಲ್ಲ ಎಂದು ಮಂಗಳವಾರ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.


ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿ ಒಟ್ಟು ಮೀಸಲು ಪ್ರಮಾಣವನ್ನು ಶೇ. 50 ರಿಂದ ಶೇ.56ಕ್ಕೆ ಏರಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯಿದೆ–2022 ಅನ್ವಯ ಹೆಚ್ಚು ಮೀಸಲಾತಿ ನೀಡುತ್ತಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಲಾಗಿತ್ತು.


ಈ ಅರ್ಜಿಯನ್ನು ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದಲ್ಲಿ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರಾ ಸೇರಿದಂತೆ ಇನ್ನಿತರರು ಸಲ್ಲಿಸಿದ್ದರು. ಶೇ. 50 ಮಿತಿ ಮೀರಿದ ಸಂವಿಧಾನ ಬದ್ಧವಲ್ಲ ಎಂದು ಅವರು ವಾದಿಸಿದ್ದರು.


ಈ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗಿಯ ಪೀಠ ನಡೆಸಿತು. ಸುಪ್ರೀಂ ಕೋರ್ಟ್ ನಲ್ಲಿ ಮೀಸಲಾತಿ ಹೆಚ್ಚಳ ಸಂಬಂಧ ಅಂತಿಮ ತೀರ್ಪು ಬಾಕಿ ಇರುವುದರಿಂದ, ಅಂತಿಮ ಆದೇಶ ಬರುವವರೆಗೂ ಪ್ರಸ್ತುತ ಜಾರಿಯಲ್ಲಿರುವ ಶೇ. 50 ಮೀಸಲಾತಿ ಮಿತಿಯನ್ನೇ ಅನುಸರಿಸುವಂತೆ ಹೈಕೋರ್ಟ್ ಸೂಚಿಸಿದೆ.


ಮೀಸಲಾತಿ ಹೆಚ್ಚಳ ಸಂಬಂಧ ಮಧ್ಯ ಪ್ರದೇಶ ಸರ್ಕಾರದ ಆದೇಶವನ್ನು ಪ್ರಶ್ನಿಸಿರುವ ಅರ್ಜಿ ಸುಪ್ರೀಂ ಕೋರ್ಟ್ ಗೆ ವರ್ಗಾವಣೆಯಾಗಿದ್ದು, ಅದರ ವಿಚಾರಣೆ ಈ ತಿಂಗಳಲ್ಲೇ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿಗಾಗಿ ಕಾಯಲಾಗುತ್ತಿದೆ. ಆದ್ದರಿಂದ, ಪ್ರಸ್ತುತ ಹಂತದಲ್ಲಿ ಶೇ. 50 ಮೀಸಲಾತಿ ನಿಯಮದಂತೆ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಮಧ್ಯಂತರ ಆದೇಶ ನೀಡಲಾಗುತ್ತಿದೆ ಎಂದು ಹೈಕೋರ್ಟ್ ನ್ಯಾಯ ಪೀಠ ಸ್ಪಷ್ಟಪಡಿಸಿದೆ.


ಈ ಪ್ರಕರಣದ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಅಡೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಜರಾಗಿ, "ನ್ಯಾಯಾಲಯ ಹಾಲಿ ಅರ್ಜಿಗಳನ್ನು ನಿರ್ಧರಿಸುವವರೆಗೆ ಶೇ. 50ರ ಮೀಸಲಾತಿ ಪ್ರಕಾರ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸುತ್ತವೆ, ಹೆಚ್ಚುವರಿ ಶೇ.6 ಮೀಸಲಾತಿಯನ್ನು ತಾತ್ಕಾಲಿಕವಾಗಿ ಅನ್ವಯಿಸುವುದಿಲ್ಲ. ಆದರೆ ಆಯ್ಕೆ ಪ್ರಕ್ರಿಯೆ ಸ್ಥಗಿತಗೊಳ್ಳದಂತೆ ಮುಂದುವರಿಸಲು ಅವಕಾಶ ನೀಡಬೇಕು"ಎಂದು ಮನವಿ ಮಾಡಿದರು.


ಅವರು ಮುಂದುವರೆದು, ಶೇ.56 ಮೀಸಲಾತಿಯಂತೆ ನೇಮಕಾತಿ ಪ್ರಕ್ರಿಯೆ ನಡೆಸಿ, ನ್ಯಾಯಾಲಯದ ಶೇ. 50 ಮೀಸಲಾತಿಯಂತೆ ನೇಮಕಾತಿ ನಡೆಸಬಹುದು. ಶೇ. 50 ಮೀಸಲಾತಿ ಪ್ರಕಾರ ನಡೆಯುವ ನೇಮಕಾತಿಯಲ್ಲಿ ನ್ಯಾಯಾಲಯ ಮಧ್ಯಪ್ರದೇಶ ಮಾಡುವುದಿಲ್ಲ. ಆದರೆ ಮೀಸಲಾತಿ ಹೆಚ್ಚಿಸಿ ನೇಮಕಾತಿ ನಡೆಸಲು ಸರ್ಕಾರ ಮುಂದಾದರೆ, ನೇಮಕಾತಿ ಪ್ರಕ್ರಿಯೆಯನ್ನೇ ಮುಂದುವರೆಸಲು ಸಾಧ್ಯವಾಗುವುದಿಲ್ಲ. ಅದು ಸರ್ಕಾರಕ್ಕೆ ಇರುವ ಆಯ್ಕೆ ಎಂದು ಸ್ಪಷ್ಟವಾಗಿ ತಿಳಿಸಿತು.


ಹೈ ಕೋರ್ಟ್, ಶೇ.50 ಮೀರಿದ ಹೆಚ್ಚುವರಿ ಮೀಸಲಾತಿ ಅನ್ವಯ ಹೊಸ ನೇಮಕಾತಿಗಳಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟ ಆದೇಶ ನೀಡಿತು, ಈ ಕುರಿತು ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿದಲ್ಲಿ, ಅದನ್ನು ಪರಿಶೀಲಿಸಲಾಗುವುದು ಎಂದು ಪೀಠ ತಿಳಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಅಡೋಕೇಟ್ ಜನರಲ್,"ಸರ್ಕಾರದಿಂದ ಸೂಚನೆ ಪಡೆದು ಪೀಠಕ್ಕೆ ಮಾಹಿತಿ ನೀಡಲಾಗುತ್ತದೆ" ಎಂದು ಹೇಳಿದರು.


ಅರ್ಜಿದಾರರ ಪರ ವಕೀಲರು, ಈ ಹಾಲಿ ಅರ್ಜಿ ಇತ್ಯರ್ಥವಾಗುವವರೆಗೆ, ಮೀಸಲಾತಿ ಹೆಚ್ಚಿಸಿರುವುದನ್ನು, ಆದರಿಸಿ ಯಾವುದೇ ಹೊಸ ನೇಮಕಾತಿ, ಅದಿ ಸೂಚನೆ ಹೊರಡಿಸಬಾರದು ಎಂದು ಹೈಕೋರ್ಟ್ ಈಗಾಗಲೇ ಆದೇಶ ನೀಡಿದೆ. ಅದರ ಮರುಪರಿಶೀಲನೆ ಅಥವಾ ಮಾರ್ಪಡಿಕೆ ಸರ್ಕಾರ ಪ್ರಯತ್ನಿಸುತ್ತಿದೆ.


ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿ ಒಟ್ಟು ಮೀಸಲಾತಿಯನ್ನು ಶೇ.56 ಕ್ಕೆ ಏರಿಸಿರುವ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಹೈಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.


ರಾಜ್ಯ ಸರ್ಕಾರ 2023ರ ಜನವರಿ 12ರಂದು ಅಧಿಸೂಚನೆ ಹೊರಡಿಸಿ, ಪರಿಶಿಷ್ಟ ಜಾತಿಗೆ ಮೀಸಲಾತಿಯನ್ನು ಶೇ.15 ರಿಂದ17 ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳಿಗೆ ಶೇ.3 ರಿಂದ ಶೇ.7 ವರಿಗೂ ಹೆಚ್ಚಳ ಮಾಡಿತ್ತು. ಈ ಮೂಲಕ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣವು ಶೇ.50 ಕಲ್ಲೂರು ಮಿತಿಯನ್ನು ಮೀರಿ ಶೇ.56ಕ್ಕೆ ತಲುಪಿತು.


ಅಧಿಸೂಚನೆ ಸಂವಿಧಾನದ ಮೂಲಭೂತ ತತ್ವಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ, ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟ ಸೇರಿದಂತೆ ಅರ್ಜಿದಾರರು ಹೈಕೋರ್ಟ್ ಗೆ ಸಾರ್ವಜನಿಕ ಹಿತ ಶಕ್ತಿ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ಹಲೋ ತೀರ್ಪುಗಳಿಗೆ ಶೇ. 50 ಮಿತಿಯೇ ಸಾಮಾನ್ಯ ನಿಯಮ ಎಂದು ಸ್ಪಷ್ಟಪಡಿಸಿದ್ದು, ಅದನ್ನು ಮೀರಲು ಅಪರೂಪದ ಪರಿಸ್ಥಿತಿಗಳು ಅಗತ್ಯವಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.


ಅರ್ಜಿಯಲ್ಲಿ, ಶೇ.56 ಮೀಸಲಾತಿ ಜಾರಿಗೆ ತರಲು ಅಗತ್ಯವಾದ ಸಂವಿಧಾನಿಕ ನ್ಯಾಯೀಕರಣ ಡೇಟಾ ಮತ್ತು ಅಸಾಧಾರಣ ಪರಿಸ್ಥಿತಿಗಳ ಸಮರ್ಪಕ ದಾಖಲೆಗಳನ್ನು ಸರ್ಕಾರ ಸಲ್ಲಿಸಿಲ್ಲ ಎಂದು ಕೂಡ ಉಲ್ಲೇಕೀಸಲಾಗಿದೆ. ಆದ್ದರಿಂದ ಈ ಅಧಿಸೂಚನೆಯನ್ನು ತಕ್ಷಣವೇ ರದ್ದು ಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.


ಇನ್ನಷ್ಟು ಓದಿರಿ:


ಚೀನಾದ ಜನನ ಪ್ರಮಾಣ ಬಾರಿ ಕುಸಿತ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online