ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ನರ್ಮದಾ ನದಿಯ ದಡದಲ್ಲಿ ವಿಷಾಹಾರ ಸೇವಿಸಿ ಕನಿಷ್ಠ 200 ಗಿಳಿಗಳು ಸಾವನ್ನಪ್ಪಿದ ಘಟನೆ ಇತ್ತೀಚಿಗೆ ಬೆಳಕಿಗೆ ಬಂದಿತ್ತು. ಬದ್ವಾ ಪ್ರದೇಶದ ನದಿ ದಂಡೆಯಲ್ಲಿರುವ ಸೇತುವೆಯ ಸಮೀಪ ನಾಲ್ಕು ದಿನಗಳಲ್ಲಿ ಇಷ್ಟು ಪ್ರಮಾಣದ ಗಿಳಿಗಳು ಸಾವನ್ನಪ್ಪಿದ್ದವು. ಇದಕ್ಕೆ ಹಕ್ಕಿ ಜ್ವರ ಕಾರಣ ಎಂದು ಮೊದಲಿಗೆ ಶಂಕಿಸಲಾಗಿತ್ತು. ಆದರೆ, ಮೃತಪಟ್ಟ ಗಿಳಿಗಳ ಕಳೇಬರಗಳ ಮರಣೋತ್ತರ ಪರೀಕ್ಷೆ ನಡೆಸಿದಾಗ ಅವುಗಳ ಸಾವಿಗೆ ವಿಷ ಪ್ರಾಶನ ಕಾರಣವಾಗಿದೆ ಎಂಬುದು ದೃಢಪಟ್ಟಿತ್ತು. ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆಲವು ಗಿಳಿಗಳು ಜೀವಂತ ಇದ್ದವು. ಆದರೆ, ಆಹಾರದಲ್ಲಿನ ವಿಷ ಪ್ರಮಾಣ ತೀವ್ರವಾಗಿದ್ದ ಕಾರಣ ಅವು ಬದುಕಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾ ವನ್ಯಜೀವಿ ವಾರ್ಡನ್ ಟೋನಿ ಶರ್ಮಾ ತಿಳಿಸಿದ್ದರು.ಕಲುಷಿತ ನೀರು ಸೇವಿಸಿ 10 ಮಂದಿ ಸಾವನ್ನಪ್ಪಿದ ಬಳಿಕ ಮತ್ತೆ ಇಂದೋರ್ನಲ್ಲಿ ಅತಿಸಾರ ಪ್ರಕರಣಗಳು ದಾಖಲಾಗಿವೆ. ಇದೀಗ 142 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 11 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾಗೀರಥಪುರ ಪ್ರದೇಶದಲ್ಲಿ 9,000ಕ್ಕೂ ಹೆಚ್ಚು ಜನರನ್ನು ತಪಾಸಣೆ ಮಾಡಿದ್ದು, 20 ಹೊಸ ರೋಗಿಗಳು ಪತ್ತೆಯಾಗಿದ್ದಾರೆ.
ಇನ್ನಷ್ಟು ಓದಿರಿ : ಜನವರಿ 11ರಂದು ‘ಸೋಮನಾಥ ಸ್ವಾಭಿಮಾನ್ ಪರ್ವ’ ಪ್ರಧಾನಿ ಮೋದಿ