<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನ ಉದ್ಘಾಟನೆ : ಪ್ರಧಾನಿ ಮೋದಿ

ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನ ಉದ್ಘಾಟನೆ : ಪ್ರಧಾನಿ ಮೋದಿ
Summary: ಗುರುಜರಾತದ ರಾಜಕೋಟದಲ್ಲಿ ನಡೆದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಿ ಮೋದಿಯವರು ಉದ್ಘಾಟಿಸಿದರು. ಅದೇ ವೇಳೆಯಲ್ಲಿ UPI ವಿಶ್ವದ ನಂ.1 ಡಿಜಿಟಲ್ ವಹಿವಾಟು ವೇದಿಕೆಯಾಗಿದೆ ಮತ್ತು ಮೊಬೈಲ್ ತಯಾರಿಕೆಯಲ್ಲಿ ಭಾರತ ವಿಶ್ವದ ೨ ನೇ ಅತಿದೊಡ್ಡ ರಾಷ್ಟ್ರವಾಗಿದೆ ಎಂದು ಪ್ರಧಾನಿ ಮೋದಿ ಭಾಷಣದಲ್ಲಿ ಹೇಳಿದರು.
BELAGAVI NEWS :

ರಾಜ್​ಕೋಟ್: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತುತ ಗುಜರಾತ್ ಪ್ರವಾಸದಲ್ಲಿದ್ದಾರೆ. ಸೋಮನಾಥದಲ್ಲಿ ನಡೆದ ಸ್ವಾಭಿಮಾನ್ ಪರ್ವದಲ್ಲಿ ಭಾಗವಹಿಸಿದ ನಂತರ ರಾಜ್‌ಕೋಟ್​ಗೆ ತಲುಪಿದರು. ಅಲ್ಲಿ ಅವರು 2 ದಿನಗಳ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವು ಕೈಗಾರಿಕೆಗಳು, ಎಂಎಸ್‌ಎಂಇಗಳು, ಸರ್ಕಾರಿ ಸಂಸ್ಥೆಗಳು ಮತ್ತು ಉದ್ಯಮಿಗಳಿಗೆ ವೇದಿಕೆಯಾಗಿದೆ. ರಾಜ್‌ಕೋಟ್​​ನಲ್ಲಿ ಆಯೋಜಿಸಿರುವ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.ಇದೇ ವೇಳೆ ಮಾತನಾಡಿದ ಅವರು, ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ವೇಗವಾಗಿ ಮುನ್ನಡೆಯುತ್ತಿದೆ. ಭಾರತದ ಮೇಲೆ ಜಗತ್ತು ನಿರೀಕ್ಷೆ ಕಣ್ಣಿನಿಂದ ನೋಡುತ್ತಿದೆ. ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆ ರಾಷ್ಟ್ರ ನಮ್ಮದಾಗಿದೆ. ಹಣದುಬ್ಬರ ನಿಯಂತ್ರಣದಲ್ಲಿದೆ. ಕೃಷಿ ಉತ್ಪಾದನೆಯು ಹೊಸ ದಾಖಲೆಗಳನ್ನು ಸ್ಥಾಪಿಸುತ್ತಿದೆ. ಹಾಲು ಉತ್ಪಾದನೆ, ಜೆನೆರಿಕ್ ಔಷಧ ತಯಾರಿಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ ಎಂದರು.ಭಾರತದ ಹಲವು ಮೊದಲುಗಳು: ಕಳೆದ 11 ವರ್ಷಗಳಲ್ಲಿ, ಭಾರತವು ವಿಶ್ವದ ಅತಿದೊಡ್ಡ ಮೊಬೈಲ್ ಡೇಟಾ ಗ್ರಾಹಕ ರಾಷ್ಟ್ರವಾಗಿದೆ. UPI ವಿಶ್ವದ ನಂ.1 ಡಿಜಿಟಲ್ ವಹಿವಾಟು ವೇದಿಕೆಯಾಗಿದೆ. ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ತಯಾರಕ ರಾಷ್ಟ್ರವಾಗಿದೆ. ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್ಅಪ್ ವೇದಿಕೆಯಾಗಿದೆ. ವಾಯುಯಾನ ಕ್ಷೇತ್ರದಲ್ಲಿ ದೇಶ ಮೂರನೇ ಸ್ಥಾನದಲ್ಲಿದೆ. ಮೆಟ್ರೋ ನೆಟ್‌ವರ್ಕ್‌ನಲ್ಲಿ ವಿಶ್ವದ ಅಗ್ರ 3ನೇ ರಾಷ್ಟ್ರ ನಮ್ಮದು ಎಂದು ಮಾಹಿತಿ ಹಂಚಿಕೊಂಡರು.

ಕಚ್‌ನಲ್ಲಿ 30 ಗಿಗಾವ್ಯಾಟ್ ಸಾಮರ್ಥ್ಯದ ನವೀಕರಿಸಬಹುದಾದ ಇಂಧನ ಪಾರ್ಕ್​ ನಿರ್ಮಿಸಲಾಗುತ್ತಿದೆ. ಇದು ವಿಶ್ವದ ಅತಿದೊಡ್ಡ ಹೈಬ್ರಿಡ್ ನವೀಕರಿಸಬಹುದಾದ ಇಂಧನ ಪಾರ್ಕ್​ ಆಗಲಿದೆ. ಇದು ಪ್ಯಾರಿಸ್ ನಗರಕ್ಕಿಂತ ಐದು ಪಟ್ಟು ದೊಡ್ಡದಾಗಿದೆ. ಹಸಿರು ಹೈಡ್ರೋಜನ್‌ನ ಬಗ್ಗೆ ನಿಮಗೆಲ್ಲರಿಗೂ ತಿಳಿದಿದೆ. ದೇಶವು ಇದರ ಉತ್ಪಾದನೆಯಲ್ಲಿ ವೇಗವಾಗಿ ಕೆಲಸ ಮಾಡುತ್ತಿದೆ. ಕಚ್ ಮತ್ತು ಜಾಮ್‌ನಗರ ಹಸಿರು ಹೈಡ್ರೋಜನ್ ಉತ್ಪಾದನೆಯ ಪ್ರಮುಖ ಕೇಂದ್ರಗಳಾಗುತ್ತಿವೆ. ಕಚ್‌ನಲ್ಲಿ ಬೃಹತ್ ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆಯನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.ಜಾಮ್​ನಗರದಲ್ಲಿ ಎಐ ಸೆಂಟರ್​: "2036 ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಅಹಮದಾಬಾದ್‌ನಲ್ಲಿ ನಡೆಸುವ ಪ್ರಧಾನಿ ಮೋದಿ ಅವರ ದೃಷ್ಟಿಕೋನವನ್ನು ಪೂರೈಸಲು ರಿಲಯನ್ಸ್ ಫೌಂಡೇಶನ್ ಸಿದ್ಧವಾಗಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಯೋಜಿಸುವ ಮತ್ತು ಭಾರತದ ಭವಿಷ್ಯದ ಚಾಂಪಿಯನ್‌ಗಳಿಗೆ ತರಬೇತಿ ನೀಡುವ ಕೇಂದ್ರವಾದ ನರನ್‌ಪುರದಲ್ಲಿರುವ ವೀರ್ ಸಾವರ್ಕರ್ ಮಲ್ಟಿಸ್ಪೋರ್ಟ್ಸ್ ಕಾಂಪ್ಲೆಕ್ಸ್ ಅನ್ನು ನಿರ್ವಹಿಸಲು ರಿಲಯನ್ಸ್ ಕಂಪನಿ ಗುಜರಾತ್ ಸರ್ಕಾರದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಲಿದೆ ಎಂದು ಹೇಳಿದರು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಮಾತನಾಡಿ, ಕಳೆದ 5 ವರ್ಷಗಳಲ್ಲಿ ನಾವು 3.5 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹೂಡಿಕೆ ಮಾಡಿದ್ದೇವೆ. ಇದು ಮುಂದಿನ ಐದು ವರ್ಷಗಳಲ್ಲಿ 7 ಲಕ್ಷ ಕೋಟಿ ರೂಪಾಯಿ ದಾಟಲಿದೆ. ಜಾಮ್‌ನಗರದಲ್ಲಿ, ದೇಶದ ಅತಿದೊಡ್ಡ ಕೃತಕ ಬುದ್ಧಿಮತ್ತೆ (ಎಐ) ಡೇಟಾ ಕೇಂದ್ರವನ್ನು ನಿರ್ಮಿಸುತ್ತಿದ್ದೇವೆ ಎಂದು ಪ್ರಧಾನಿ ಮೋದಿಯವರು ಭಾಷಣದಲ್ಲಿ ತಿಳಿಸಿದ್ದಾರೆ.


ಇನ್ನಷ್ಟು ಓದಿರಿ:
ಮಸೂದ್ ಅಜರ್ ಆಡಿಯೋ ಕ್ಲಿಪ್ ವೈರಲ್: ಭಾರತದ ಮೇಲೆ ದಾಳಿ ಬಾಂಬರ್ ಗಳು ರೆಡಿ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online