<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಕರ್ನಾಟಕ ಹವಾಮಾನ ವರದಿ : ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಎಚ್ಚರಿಕೆ

ಕರ್ನಾಟಕ ಹವಾಮಾನ ವರದಿ : ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಗಾಳಿ ಸಹಿತ ಮಳೆಯ ಎಚ್ಚರಿಕೆ
Summary: Karnataka weather forecast - Heavy rain is forecast in many districts of coastal and interior Karnataka. The Meteorological Department has issued a warning of windy weather, here is the district-wise weather update.

Belagavi News :

ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರೆಯಲಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುವ ಸಾಧ್ಯತೆಯಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣದಿಂದ ಮಾಧ್ಯಮ ಮಳೆಯಾಗಲಿದೆ.

ಕರ್ನಾಟಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆ ಆಗುವ ಸಾಧ್ಯತೆ ಇದೆ. ಮಲೆನಾಡು ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿಯೂ ಮಳೆಯ ಪ್ರಭಾವ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಮಲೆನಾಡಿನ ಭಾಗಗಳಲ್ಲಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಮಳೆಯ ಸಾಧ್ಯತೆ ಇದೆ. ಸಾರ್ವಜನಿಕರು ಮಳೆ ಹಾಗೂ ಗಾಳಿಯ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ - ಕರಾವಳಿ ಭಾಗದಲ್ಲಿ ಭಾರಿ ಮಳೆ ಎಚ್ಚರಿಕೆ :

ಕರ್ನಾಟಕದಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆ ಇದ್ದು, ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರೆಯಲಿದೆ.

ಜುಲೈ 22ರಂದು ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ :

ಜುಲೈ 22ರಂದು ಕರಾವಳಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಕರ್ನಾಟಕದಲ್ಲಿ ಎಲ್ಲಿ ಹೆಚ್ಚು ಮಳೆಯಾಗಿದೆ ? :

ಜುಲೈ 20ರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲಿ ಅತಿ ಹೆಚ್ಚು 11 ಸೆಂ.ಮೀ ಮಳೆ ದಾಖಲಾಗಿದೆ.

ಇನ್ನೂ ಪ್ರಮುಖ ಮಳೆಯ ಪ್ರಮಾಣ :

1. ಕಮ್ಮರಡಿ (ಚಿಕ್ಕಮಗಳೂರು) - 11ಸೆಂ.ಮೀ

2. ಸಿದ್ದಾಪುರ (ಉಡುಪಿ) - 10 ಸೆಂ.ಮೀ

3. ಸುಬ್ರಹ್ಮಣ್ಯ(ದಕ್ಷಿಣ ಕನ್ನಡ) - 8 ಸೆಂಮೀ

4. ಬೆಳ್ತಂಗಡಿ (ದಕ್ಷಿಣ ಕನ್ನಡ) - 7 ಸೆಂ.ಮೀ

5. ಜಗಲ್ ಬೆಟ್ (ಉತ್ತರ ಕನ್ನಡ) - 7 ಸೆಂ.ಮೀ

6. ಕೆಂಭಾವಿ (ಯಾದಗಿರಿ) - 7 ಸೆಂ.ಮೀ

7. ಮಂಗಳೂರು ವೀಕ್ಷಣಾಲಯ - 7ಸೆಂ.ಮೀ

8. ಮೂಡಬಿದರೆ (ದಕ್ಷಿಣ ಕನ್ನಡ) - 7 ಸೆಂ.ಮೀ

9. ಸುಳ್ಯ (ದಕ್ಷಿಣ ಕನ್ನಡ) - 7 ಸೆಂ.ಮೀ

ಬೆಂಗಳೂರು ಮಳೆ - ಜನರಿಗೆ ಎಚ್ಚರಿಕೆ :

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿ ವೇಗ ಹೆಚ್ಚಾಗುವ ಹಿನ್ನಲೆಯಲ್ಲಿ ಮರಗಳ ಕೆಳಗೆ ವಾಹನ ನಿಲ್ಲಿಸುವುದು ಹಾಗೂ ದುರ್ಬಲ ಕಟ್ಟಡಗಳ ಬಳಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online