<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ : ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ
Summary: ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದಿದೆ. ಗಲಭೆ, ಹಲ್ಲೆ,ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಸರ್ಕಾರದ ನಿರ್ಲಕ್ಷದಿಂದ ರಾಜ್ಯ ರಾಜಕತೆಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
Belagavi news :

ಈ ನಮ್ಮ ರಾಜ್ಯದಲ್ಲಿ ಫೈರಿಂಗ್ ನಂತಹ ಭೀಕರ ಘಟನೆಗಳು ನಡೆದರೂ ಕಾಂಗ್ರೆಸ್ ಸರ್ಕಾರ ಯಾವುದೇ ನೈತಿಕ ಹೊಣೆಗಾರಿಕೆಯನ್ನು ವಹಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರವಾಗಿ ಕಿಡಿಕಾರಿದ್ದಾರೆ. ಸರ್ಕಾರದ ನಿರ್ಲಕ್ಷ್ಯ ಮತ್ತು ಆಡಳಿತ ವೈಫಲ್ಯದಿಂದ ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಅಪರಾಧಗಳು ದಿನೇ ದಿನೇ ಹೆಚ್ಚುತ್ತಿವೆ. ಇಂತಹ ಘಟನೆಗಳಿಗೂ ಸರ್ಕಾರ ಮೌನ ವಹಿಸಿರುವುದು ಜನರ ಸುರಕ್ಷತೆ ಕುರಿತು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷವನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದರು.

ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆಯಿಂದ ಫೈರಿಂಗ್ ಘಟನೆಗಳು ಹಾಗೂ ಹೆಚ್ಚುತ್ತಿರುವ ಕೊಲೆ,ದರೋಡೆ, ದರ್ಪ ಮತ್ತು ದೌರ್ಜನ್ಯ ಪ್ರಕರಣಗಳು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ನೇರ ಕಾರಣಗಳಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಈ ಬಳ್ಳಾರಿ ನಗರದ ಎಪಿಎಂಸಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಸಮಾವೇಶವನ್ನು ಉದ್ದೇಶಿಸಿ, ಮಾತನಾಡಿದ ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ರಾಜ್ಯವನ್ನು ರಾಜ್ಯ ಕತೆಯತ್ತ ತಳ್ಳುತ್ತಿದೆ ಎಂದು ವಿಜಯೇಂದ್ರ ಕಟುವಾಗಿ ಟೀಕಿಸಿದ್ದಾರೆ.
ವಾಲ್ಮೀಕಿ ಸಮುದಾಯಕ್ಕೆ ನಿಮ್ಮ ಕೊಡುಗೆ ವಿಜೇಂದ್ರ ಅವರು ಕಾಂಗ್ರೆಸ್ ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ. ವಾಲ್ಮೀಕಿ ಸಮುದಾಯದ ಪರವಾಗಿ ನೀವು ಏನು ಮಾಡಿದ್ದೀರಿ ಎಂಬ ಸ್ಪಷ್ಟಪಡಿಸಬೇಕೆಂದು ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಶ್ರೀರಾಮುಲು ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಡಳಿತ ಅವಧಿಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ಶೇ.3 ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಶ್ರೀ ರಾಮಲು ಮತ್ತು ಜನಾರ್ಧನ್ ರೆಡ್ಡಿ ಅವರು ಕೈಗೊಂಡಿರುವ ಪಾದಯಾತ್ರೆಗೆ ಯಾವುದೇ ವಿರೋಧವಿಲ್ಲ. ಈ ಹೋರಾಟ ಯಾರ ವಿರುದ್ಧವೂ ಅಲ್ಲ, ಇದು ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದು ಸ್ಪಷ್ಟಪಡಿಸಿದರು.

ಬಳ್ಳಾರಿಯಲ್ಲಿ ಕಾನೂನು ಕಾನೂನು-ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಅಪರಾಧಿಗಳಿಗೆ ಸರ್ಕಾರವೇ ರಕ್ಷಣೆಯಾಗಿ ನಿಂತಿದೆ. ರಾಜಕೀಯ ದ್ವೇಷದಿಂದಲೇ ಗಲಾಟೆ,ಹಿಂಸಾಚಾರ ಮತ್ತು ಫೈರಿಂಗ್ ಪ್ರಕರಣಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಇದರಿಂದ ಸಾಮಾನ್ಯ ನಾಗರಿಕರು ಭಯ ಭೀತಿ ವಾತಾವರಣದಲ್ಲಿ ಬದುಕುವಂತಾಗಿದೆ. ಆರೋಪಿಸಿದ್ದಾರೆ.

ಫೈರಿಂಗ್ ನಂತಹ ಭೀಕರ ಘಟನೆಗಳು ನಡೆದರೂ ಕಾಂಗ್ರೆಸ್ ಸರ್ಕಾರ ಯಾವುದೇ ನೈತಿಕ ಹೊಣೆಗಾರಿಕೆ ವಹಿಸಿಲ್ಲ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ ಪ್ರಕರಣಗಳನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಇದು ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಇಲ್ಲ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ವಿಜೇಂದ್ರ ಅಶೋಷ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ರೈತ ವಿರೋಧಿ,ಜನವಿರೋಧಿ, ಅಭಿವೃದ್ಧಿ ವಿರೋಧಿ ಹಾಗೂ ಮಹಿಳಾ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ನಾಯಕರು ತೀವ್ರವಾಗಿ ಆರೋಪಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದನೆ ಇಲ್ಲದೆ, ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗಿದೆ. ಯುವಕರಿಗೆ ಉದ್ಯೋಗ ಸಿಗದೇ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ ಎಂದು ದೂರಿದರು. ಗಣಿಗಾರಿಕೆ ಕೈಗಾರಿಕೆ ಮತ್ತು ಕೃಷಿಗೆ ಮಹತ್ವ ಹೊಂದಿರುವ ಬಳ್ಳಾರಿಯಂತಹ ಜಿಲ್ಲೆಯಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತಗೊಂಡಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನರಲ್ಲಿ ಅಸಮಾಧಾನ ಹೆಚ್ಚುತ್ತಿದೆ, ಜೊತೆಗೆ ಜನರು ಭಯ ಮತ್ತು ಅಸುರಕ್ಷತೆ ನಡುವೆ ಜೀವನ ನಡೆಸುವಂತಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಸರ್ಕಾರದ ವಿರುದ್ಧ ಜನರ ಆಕ್ರೋಶ ದಿನೇ ದಿನೇ ಹೆಚ್ಚುತ್ತಿದ್ದು,ಮುಂದಿನ ದಿನಗಳಲ್ಲಿ ಜನರು ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ. ಬಳ್ಳಾರಿಯ ಶಾಂತಿ ಭದ್ರತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಸದಾ ಹೋರಾಟ ನಡೆಸಲಿದೆ ಎಂದು ವಿಜಯೇಂದ್ರ ಘೋಷಿಸಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾದರೆ ವಿಜಯೇಂದ್ರ ರವರು ಫೈರಿಂಗ್ ನಂತಹ ಭೀಕರ ಘಟನೆಗಳು ನಡೆದರು ಕಾಂಗ್ರೆಸ್ ಸರ್ಕಾರ ಯಾವುದೇ ನೈತಿಕ ಹೊಣೆಗಾರಿಕೆಯನ್ನು ವಹಿಸಿಲ್ಲ ಎಂದು ಕಿಡಿ ಕಾರಿದ್ದಾರೆ.

ಇನ್ನಷ್ಟು ಓದಿರಿ:
ಭಾರತ - ಅಮೆರಿಕ : ಜೈಶಂಕರ್ - ರುಬಿಯೋ ಮಾತುಕತೆ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online