<?= $pageTitle ?>
Logo
ಮುಖಪುಟ ಓದುವುದು ಕೇಳು
Trending

NEET ಪೇಪರ್ ಲೀಕ್ ಪ್ರಕರಣ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

NEET ಪೇಪರ್ ಲೀಕ್ ಪ್ರಕರಣ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
Summary: Amid the NEET question paper leak controversy, Congress leader Rahul Gandhi has launched a strong attack on the central government. "Metro and internet can be shut down, but paper leaks cannot be stopped," Rahul Gandhi alleged, demanding that the government should take responsibility for the problems of students. Know the complete information on NEET scam, student protests and Rahul Gandhi's response here.

Belagavi news:

ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ದೇಶದ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ನೀಟ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮುಂದಿಟ್ಟಿರುವ ಮೂರು ಪ್ರಮುಖ ಬೇಡಿಕೆಗಳ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆಗಾಗಿ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಾಂಶಗಳು:

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ಖಂಡಿಸಿದ್ದಾರೆ.

ಮೆಟ್ರೋ ಇಂಟರ್ನೆಟ್ ಬಂದ್ ಮಾಡಿದರೂ ಪೇಪರ್ ಲೀಕ್ ತಡೆಯಲಾಗಿಲ್ಲವೆಂದು ವಾಗ್ದಾಳಿ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ:

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಅಥವಾ ಪ್ರಧಾನಿ ಮೋದಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

" ಧರ್ಮೇಂದ್ರ ಪ್ರಧಾನ್ ಅವರಿಗೆ ಬೇರೆ ಯಾವುದೇ ಸಚಿವಾಲಯದ ಜವಾಬ್ದಾರಿ ನೀಡಿದರು ಅದನ್ನು ಒಪ್ಪಲು ಸಾಧ್ಯವಿಲ್ಲ. ಅವರು ಸಚಿವ ಸ್ಥಾನದಲ್ಲೇ ಮುಂದುವರಿಯಬಾರದು" ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಸಲಹೆಗಳಿಗೆ ಕಾಯದೆ ನೇರವಾಗಿ ದೇಶದ ವಿದ್ಯಾರ್ಥಿಗಳೊಂದಿಗೆ ಮಾತನಾಡಬೇಕು ಮತ್ತು ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮಕ್ಕೆ ಟೀಕೆ;

ನೀಟ್ ಅಕ್ರಮದ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಕೈಗೊಂಡ ಕ್ರಮವನ್ನು ರಾಹುಲ್ ಗಾಂಧಿ ಖಂಡಿಸಿದ್ದಾರೆ. ಪ್ರತಿಭಟನಾ ಸ್ಥಳದಿಂದ ವಿದ್ಯಾರ್ಥಿಗಳನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿದ ಅವರು, ಲಾಠಿ ಚಾರ್ಜ್ ಹಾಗೂ ಇತರ ಬಲಪ್ರಯೋಗದ ಕ್ರಮಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

"ಮೆಟ್ರೋ, ಇಂಟರ್ನೆಟ್ ಬಂದ್ ಮಾಡಬಹುದು, ಪೇಪರ್ ಲೀಕ್ ತಡೆಯಲು ಆಗಲ್ಲ"

ಪ್ರತಿಭಟನೆ ನಿಯಂತ್ರಿಸಲು ಮೆಟ್ರೋ ರೈಲು ಸೇವೆ ಮತ್ತು ಇಂಟರ್ನೆಟ್ ಸ್ಥಗಿತಗೊಳಿಸುವ ಕ್ರಮಗಳನ್ನು ಸರ್ಕಾರ ಕೈಗೊಳ್ಳಬಹುದು. ಆದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ನೀಟ್ ಪರೀಕ್ಷಾ ಅಕ್ರಮದ ಕುರಿತು ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ನೀಟ್ ವಿವಾದ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ರಾಜಕೀಯ ಬೆಳವಣಿಗೆಗಳು ಇದೀಗ ತೀವ್ರಗೊಂಡಿವೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online