<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Education

ಸರ್ಕಾರದ ಹೊಸ ಘೋಷಣೆ :ಶಾಲಾ ಮಕ್ಕಳಿಗೆ ಗುಡ್ ನ್ಯೂಸ್!

ಸರ್ಕಾರದ ಹೊಸ ಘೋಷಣೆ :ಶಾಲಾ ಮಕ್ಕಳಿಗೆ ಗುಡ್ ನ್ಯೂಸ್!
Summary: 1ರಿಂದ 12ನೇ ತರಗತಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಬಂದಿದೆ. ಶಿಕ್ಷಣಕ್ಕೆ ಸಂಬಂಧಿಸಿದ ಹೊಸ ತೀರ್ಮಾನದ ಮೂಲಕ ಪೋಷಕರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

belagavi news:

ಈ ಯೋಜನೆಯಿಂದ ಶಾಲಾ ಮಕ್ಕಳಿಗೆ ನೇರ ಲಾಭ ದೊರೆಯಲಿದ್ದು, ಶುಲ್ಕ, ಪಠ್ಯಪುಸ್ತಕ, ಯೂನಿಫಾರ್ಮ್ ಸೇರಿದಂತೆ ಶಿಕ್ಷಣ ವಚ್ಚದಲ್ಲಿ ರಿಲೀಫ್ ಸಿಗಲಿದೆ. ಯೋಜನೆಯ ಅರ್ಹತೆ, ಅನ್ವಯವಾಗುವ ವರ್ಗ, ಜಾರಿಗೆ ದಿನಾಂಕ ಹಾಗೂ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ.

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ರಾಜ್ಯದ 3,862 ಸರ್ಕಾರಿ ಹಿರಿಯ ಪ್ರಾಥಮಿಕ ಪ್ರೌಢಶಾಲೆ ಮತ್ತು ಕೆಜಿಬಿವಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ನಿರ್ಮಾಣಕ್ಕೆ ಅಂದಾಜು 91. 54 ಕೋಟಿ ರೂಪಾಯಿ ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಫೆಬ್ರುವರಿ 3 ಕರ್ನಾಟಕದಿಂದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ (Students) ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ್ ಯೋಜನೆಯಡಿ ( vidya vikas scheme) ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್ (Text and Note Book) ವಿತರನೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.

Sponsored

ಈ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಡಿಜಿಟಲ್ ಕಲಿಕೆಯ ಆಧುನಿಕ ಸೌಲಭ್ಯ ಒದಗಿಸಲಾಗುತ್ತಿದೆ. ಇವುಗಳ ಜೊತೆಗೆ 1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸರಕಾರ ಮತ್ತು ಸಿಹಿ ಸುದ್ದಿ ನೀಡಿದ್ದು, ಹೊಸ ತೀರ್ಮಾನದ ಫಲವಾಗಿ ಪೋಷಕರ ಮೇಲಿನ ಆರ್ಥಿಕ ಹೊರೆಸ ಕಡಿಮೆಯಾಗಲಿದೆ.

ಸರ್ಕಾರದ ಈ ಮಹತ್ವದ ಕಾರ್ಯಗಳು ಶಾಲಾ ಶಿಕ್ಷಣದಲ್ಲಿ ಗುಣಮಟ್ಟವನ್ನು ಹೆಚ್ಚಿಸುವುದಕ್ಕೆ ಮತ್ತು ಪೋಷಕರಿಗೆ ಆರ್ಥಿಕ ರಿಲೀಫ್ ಒದಗಿಸುವುದಕ್ಕೆ ಸಹಾಯಮಾಡುತ್ತವೆ.

ಹೌದು.. 2026 27ನೇ ಸಾಲಿನ 1ರಿಂದ 10ನೇ ತರಗತಿಯವರಿಗೆ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಮತ್ತು ದೃತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ನೀಡಲು ಅನುಮೋದನೆ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಶುಭ ಮಂಗಳ ಅವರು ಆದೇಶ ಹೊರಡಿಸಿದ್ದಾರೆ.

ಪೋಷಕರ ಹೊರೆ ಇಳಿಸಿದ ಸರ್ಕಾರ:

Sponsored

ಒಂದರಿಂದ 10ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಪಠ್ಯಪುಸ್ತಕ ನೀಡಲಾಗುತ್ತಿತ್ತಾದರೂ ಪೋಷಕರು ನೋಟ್ ಬುಕ್ ಕೊಡಿಸಬೇಕಿತ್ತು.

ಇನ್ನು 1 ರಿಂದ 12ನೇ ತರಗತಿಗಳು ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದಲೇ ಪಠ್ಯಪುಸ್ತಕ ಹಾಗೂ ನೋಟ್ಬುಕ್ ಉಚಿತವಾಗಿ ನೀಡುವುದರಿಂದ ಪೋಷಕರ ಹೊರೆ ತಪ್ಪಲಿದೆ. ಇನ್ನು 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೂ ಸಹ ಪುಸ್ತಕ ನೀಡುತ್ತಿರುವುದರಿಂದ ಪೋಷಕರ ಹೊರೆ ಕಡಿಮೆ ಯಾಗಲಿದೆ.

ಇದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಸುಮಾರು 61 ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ. ಈ ಮೂಲಕ ಮೊದಲ ಬಾರಿಗೆ ಒಂದರಿಂದ ಹನ್ನೆರಡನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕದ ಜೊತೆಗೆ ನೋಟ್ಬುಕ್ ಸಹ ವಿತರಣೆ ಮುಂದಾಗಿದೆ.

ಆದೇಶದಲ್ಲೇನಿದೆ?

Sponsored

ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ದ್ವಿ ಭಾಷಾ ಬಾಲ ಚೇತನ ಚಟುವಟಿಕೆ ಪುಸ್ತಕಗಳು, ಸರ್ಕಾರಿ ಶಾಲೆಗಳ ನಾಲ್ಕರಿಂದ 9ನೇ ತರಗತಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕ ಮತ್ತು ಸರ್ಕಾರಿ ಶಾಲಾ ಕಾಲೇಜುಗಳ ಪೂರ್ವ ಪ್ರಾಥಮಿಕ ತರಗತಿಗಳಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ಮತ್ತು 1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ವಿತರಿಸಲು ಸೂಚಿಸಲಾಗಿದೆ.

ಕರ್ನಾಟಕ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಶೈಶನಿಕ ಸಂಪತ್ಮೂಲಗಳ ವಿತರಣೆಗೆ ಸರ್ಕಾರ ಪ್ರಮುಖ ಕ್ರಮಗಳನ್ನು ಕೈಗೊಂಡಿದೆ.

ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ದ್ವಿ ಭಾಷಾ ಬಾಲ ಚೇತನ ಚಟುವಟಿಕೆ ಪುಸ್ತಕಗಳು, 4 ರಿಂದ 9ನೇ ತರಗತಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕಗಳು, ಮತ್ತು ಒಂದರಿಂದ 12ನೇ ತರಗತಿ ಗೆ ದಿನಚರಿ ಹಾಗೂ ಮೂಲ ಶಿಕ್ಷಣ ಪುಸ್ತಕಗಳನ್ನು ವಿತರಿಸಲು ಸೂಚಿಸಲಾಗಿದೆ.

ಕೆಟಿಪಿಪಿ ಕಾಯ್ದೆ 1999ರ ಅಡ್ಡಿ ಪಾರದರ್ಶಕ ಟೆಂಡರ್ ಮೂಲಕ ಕರ್ನಾಟಕ ಪುಸ್ತಕ ಸಂಘದ ಮೂಲ ಮುದ್ರಣ ಮತ್ತು ವಿತರಣೆ ನಿರ್ವಹಿಸುತ್ತದೆ. ಒಟ್ಟು 264. 62 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯಾ ವಿಕಾಸ್ ಯೋಜನೆಯಡಿ ಈ ಕಾರ್ಯಕ್ರಮಕ್ಕೆ ಅನುಮೋದನೆ ನೀಡಲಾಗಿದೆ.

Sponsored

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಹೊಸ ಕಾರ್ಯಕ್ರಮಗಳಿಗೆ 25.841 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಶಾಲಾ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಪಠ್ಯಪುಸ್ತಕ ಬೇಡಿಕೆ ಮಾಹಿತಿಯನ್ನು ಎಸ್ ಎಟಿಎಸ್ ಮೂಲಕ ಸಂಗ್ರಹಿಸಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿತರಣೆ ಮಾಡಲಿರುವಂತೆ ಆದೇಶ ಪ್ರಕಟಿಸಲಾಗಿದೆ.

ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಿದ ಶಿಕ್ಷಣ ಇಲಾಖೆ:

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ಅಭ್ಯಾಸ ಪುಸ್ತಕ ಹಾಗೂ 1ರಿಂದ 12ನೇ ತರಗತಿವರೆಗೆ ದಿನಚರಿ ಪುಸ್ತಕ ವಿತರಣೆ ಸಂಬಂಧಿಸಿದ ಇಲಾಖೆಯು 30 ಕೋಟಿ 83 ಲಕ್ಷದ 25 ಸಾವಿರ ಹಣದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿತ್ತು.

ಇದರ ಬೆನ್ನಲ್ಲೇ ಮುಂದಿನ ಶೈಷಣಿಕ ವರ್ಷದ ಆರಂಭದಲ್ಲೇ ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲು ತಯಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಶುಭ ಮಂಗಳ ಆದೇಶ ಹೊರಡಿಸಿದ್ದಾರೆ. ಇದೀಗ ಶಿಕ್ಷಣ ಇಲಾಖೆ ಸಲ್ಲಿಸಿದ ಪ್ರಸ್ತಾವನೆ ಸರ್ಕಾರ ಸಹ ಒಪ್ಪಿಗೆ ಸೂಚಿಸಿದ್ದು ಈ 290.46 ಕೋಟಿ ರೂ ಅನುದಾನವನ್ನು ಶಾಲಾ ಶಿಕ್ಷಣಿ ಇಲಾಖೆಗೆ ಗ್ರೀನ್ ಸಿಗ್ನಲ್ ನೀಡಿದೆ.

Sponsored

ಇನ್ನು ಪಠ್ಯಪುಸ್ತಕದ ಕಾಗದ ಮತ್ತು ಮುದ್ರಣ ಗುಣಮಟ್ಟ ರಾಜಿ ಆಗೋ ಹಾಗಿಲ್ಲ. ಹೆಚ್ಚುವರಿ ಪುಸ್ತಕದ ಬೇಡಿಕೆ ಸಲ್ಲಿಸಿ ಕಳ್ಳಾಟ ಆಡೋ ಹಾಗಿಲ್ಲ. ಸರ್ಕಾರದ ಹಣ ದುರುಪಯೋಗ ಮಾಡಿದ್ರೆ ಕಠಿಣ ಕ್ರಮ ಎಂದು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ಓದಿರಿ:

ಮಾರ್ಕೊ ರೂಬಿಯೊ–ಜೈಶಂಕರ್ ಭೇಟಿ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online