<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಮಾನ್ಯ ಹತ್ಯೆ ಪ್ರಕರಣದಲ್ಲಿ ಪ್ರಗತಿ : ಚಾರ್ಜ್ ಶೀಟ್​ ಸಲ್ಲಿಕೆ

ಮಾನ್ಯ ಹತ್ಯೆ ಪ್ರಕರಣದಲ್ಲಿ ಪ್ರಗತಿ : ಚಾರ್ಜ್ ಶೀಟ್​ ಸಲ್ಲಿಕೆ
Summary: ರಾಜ್ಯದಲ್ಲಿ 33 ಡಿಸಿಆರ್​ಇ ಪೊಲೀಸ್ ಠಾಣೆಗಳಿದ್ದು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಇತ್ತೀಚಿಗೆ ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಶಿಕ್ಷೆ ಕೊಡಿಸುವುದರಲ್ಲಿ ವಿಳಂಬವಾಗುತ್ತಿರುವದು ಸತ್ಯ. ಆದಷ್ಟು ನಾವು‌ ಕೂಡ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು ಎಂಬ ದೃಷ್ಟಿಯಿಂದ 60 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸುತ್ತೇವೆ. ಆದರೆ ವಿಚಾರಣೆ ಐದಾರು ವರ್ಷ ನಡೆಯುವುದರಿಂದ ಸಮರ್ಪಕವಾದ ಶಿಕ್ಷೆಯಾಗುತ್ತಿಲ್ಲ.
BELAGAVI NEWS :

ಮಾನ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಸಾಕ್ಷಿ ಲಭ್ಯವಾಗಿದೆ ಎಂದು ಡಿಜಿಪಿ ರಾಮಚಂದ್ರ ರಾವ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ಪೂರ್ಣಗೊಂಡಿದ್ದು, ಮುಂದಿನ 60 ದಿನಗಳೊಳಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ನಿರ್ಧಾರವಾಗಿದೆ. ನಗರದಲ್ಲಿ ಶನಿವಾರ ಮಾಧ್ಯಮಗೋಷ್ಟಿ ‌ನಡೆಸಿ ಮಾತನಾಡಿದ ಅವರು, "ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವೇಕಾನಂದ ದೊಡ್ಡಮನಿ ಮನೆಯ ಸಿಸಿ ಕ್ಯಾಮರಾಗಳ ರಿಕವರಿ ಮಾಡಲಾಗಿದೆ. ಒಟ್ಟು 14 ಜನರ ಮೇಲೆ ಹೆಸರು ಸಮೇತ ದೂರು ದಾಖಲಾಗಿದೆ. ಅದರಲ್ಲಿ ‌ಈಗಾಗಲೇ 8 ಜನರನ್ನು ಬಂಧಿಸಲಾಗಿದೆ. ಇದರಲ್ಲಿ ಓರ್ವ ಬಾಲಾಪರಾಧಿ ಇದ್ದಾನೆ. ತನಿಖೆ ನಡೆಸಲಾಗುತ್ತಿದೆ. ಉಳಿದವರಲ್ಲಿ ಐವರು ಮಹಿಳೆಯರ ಮೇಲೂ ಕೇಸ್ ದಾಖಲಾಗಿದ್ದು, ಅನಿವಾರ್ಯ ಬಿದ್ದರೆ ಅವರನ್ನು ‌ಬಂಧಿಸಲಾಗುವದು. ಮಾನ್ಯಳ ಪತಿ ವಿವೇಕಾನಂದ ಅವರ ಕುಟುಂಬಸ್ಥರ ಹೇಳಿಕೆ ಪಡೆಯಲಾಗಿದೆ. 60 ದಿನಗಳಲ್ಲಿ ಜಾರ್ಜ್ ಶಿಟ್ ಸಲ್ಲಿಕೆ ಮಾಡಲಾಗುತ್ತದೆ. ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ" ಎಂದರು.

ಈ ಹತ್ಯೆ ಪ್ರಕರಣವು ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ದೋಷಿ/ದೋಷಿತ ಸಂಬಂಧಿಗಳ ಪರಿಚಯ ಮತ್ತು ಪ್ರಕರಣದ ತಾತ್ಕಾಲಿಕ ವಿವರಗಳು ತನಿಖಾ ಅಧಿಕಾರಿಗಳಿಂದ ಬಹಿರಂಗಗೊಳ್ಳುತ್ತಿವೆ. ಸಾಕ್ಷ್ಯಗಳ ಒಟ್ಟು ಸಮಗ್ರ ಪರಿಶೀಲನೆ ನಂತರ, ಕಾನೂನಾತ್ಮಕ ಕ್ರಮ ಆರಂಭವಾಗಲಿದೆ. ಡಿಜಿಪಿ ರಾಮಚಂದ್ರ ರಾವ್ ಪ್ರಕಾರ, ಹೊಸ ಮಹತ್ವದ ಸಾಕ್ಷಿ ಲಭ್ಯವಾಗಿದೆ, ಇದು ತನಿಖೆಯನ್ನು ಹೆಚ್ಚಿನ ವೇಗಕ್ಕೆ ತರುವಂತೆ ಮಾಡಲಿದೆ.

ಸಾಕ್ಷಿಯು ಪ್ರಕರಣದ ದೃಢತೆಯನ್ನು ಹೆಚ್ಚಿಸುವ ಮತ್ತು ಸಂಬಂಧಿತ ವ್ಯಕ್ತಿಗಳ ವಿರುದ್ಧ ಚಾರ್ಜ್ ಶೀಟ್ ತಯಾರಿಸಲು ಸಹಾಯಕವಾಗಲಿದೆ. ಇನಾಂವೀರಾಪುರ ಗ್ರಾಮದಲ್ಲಿ ನಡೆದಿರುವ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸೌಹಾರ್ದತೆ ಕಾಪಾಡಲು ಪೊಲೀಸ್​ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಇನಾಂವೀರಾಪುರ ಗ್ರಾಮದ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸೂಕ್ತ ತನಿಖೆ ಕೈಗೊಳ್ಳಲಾಗುತ್ತಿದೆ" ಎಂದು ತಿಳಿಸಿದರು. ಸಿಸಿಟಿವಿ ಮುಖ್ಯ ಸಾಕ್ಷಿಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ.

ಮುಂದಿನ ತನಿಖೆಗಾಗಿ ಎಫ್ಎಸ್ಎಲ್​ಗೆ ರವಾನಿಸಲಾಗಿರುತ್ತದೆ. ದೌರ್ಜನ್ಯ ಪ್ರಕರಣದಲ್ಲಿ 60 ದಿನಗಳೊಳಗೆ ಚಾರ್ಜ್ ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಈ ಪ್ರಕರಣಕ್ಕೆ ಡಿಜಿಟಲ್ ಸಾಕ್ಷ್ಯಾಧಾರಗಳು ಬಹಳ ಮುಖ್ಯವಾಗಿವೆ. ವಿಶೇಷ ವಕೀಲರನ್ನು ನೇಮಕ ಮಾಡಲಾಗುವುದು. ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕಂದಾಯ ಇಲಾಖೆಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ನೊಂದವರಿಗೆ ನ್ಯಾಯ ಒದಗಿಸಲಾಗುವುದು" ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ 33 ಡಿಸಿಆರ್​ಇ ಪೊಲೀಸ್ ಠಾಣೆಗಳಿದ್ದು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಇತ್ತೀಚಿಗೆ ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಶಿಕ್ಷೆ ಕೊಡಿಸುವುದರಲ್ಲಿ ವಿಳಂಬವಾಗುತ್ತಿರುವದು ಸತ್ಯ. ಆದಷ್ಟು ನಾವು‌ ಕೂಡ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು ಎಂಬ ದೃಷ್ಟಿಯಿಂದ 60 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸುತ್ತೇವೆ. ಆದರೆ ವಿಚಾರಣೆ ಐದಾರು ವರ್ಷ ನಡೆಯುವುದರಿಂದ ಸಮರ್ಪಕವಾದ ಶಿಕ್ಷೆಯಾಗುತ್ತಿಲ್ಲ".ವಿವೇಕಾನಂದ ದೊಡ್ಡಮನಿ ಅವರ ತಾಯಿ ರೇಣವ್ವ ದೊಡ್ಡಮನಿ ಅವರು ಹುಬ್ಬಳ್ಳಿಯ ವಿವೇಕಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌. ಅವರು ಸದ್ಯದಲ್ಲಿಯೇ ಗುಣಮುಖರಾಗುತ್ತಾರೆ.

ಗ್ರಾಮೀಣ ಭಾಗದಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಇದೆ. ತನಿಖೆ ಸರಿ ದಾರಿಯಲ್ಲಿ ನಡೆಯಲಿದೆ. ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರೆಯುತ್ತೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕ್ರಮಗಳನ್ನು ಕೈಗೊಳ್ಳಲಾಗಿದೆ" ಎಂದರು. ಮಾನ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಸಾಕ್ಷಿ ಲಭ್ಯವಾಗಿದ್ದು, 60 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯ ನಿರ್ಧಾರ, ನ್ಯಾಯಾಂಗ ಪ್ರಕ್ರಿಯೆ ಮತ್ತು ಕಾನೂನು ಕ್ರಮವನ್ನು ವೇಗವಂತಗೊಳಿಸುವುದು ನಿರೀಕ್ಷಿಸಲಾಗಿದೆ.

ಇನ್ನಷ್ಟು ಓದಿರಿ:
ಚೀನಾ ಭೇಟಿ ಮುನ್ನ ಉತ್ತರ ಕೊರಿಯಾ ಕ್ಷಿಪಣಿ ಪ್ರಯೋಗ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online