<?= $pageTitle ?>
Logo
ಮುಖಪುಟ ಓದುವುದು ಕೇಳು
Trending

SIR ವಿವಾದ : ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಬೇಡಿ; ಡಿಸಿಗಳಿಗೆ ಸಿಎಂ ಮಮತಾ ಎಚ್ಚರಿಕೆ

SIR ವಿವಾದ : ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಬೇಡಿ; ಡಿಸಿಗಳಿಗೆ ಸಿಎಂ ಮಮತಾ ಎಚ್ಚರಿಕೆ
Summary: SIR ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ ಸೂಚನೆಗಳನ್ನು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮಂಗಳವಾರ ಸಚಿವಾಲಯ ನಬನ್ನಾದಲ್ಲಿ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭೆಯಲ್ಲಿಎಚ್ಚರಿಕೆಯನ್ನು ನೀಡಿದ್ದಾರೆ.
belagavi news :

ಸುಪ್ರೀಂ ಕೋರ್ಟ್ ಸೂಚನೆ ಪಾಲನೆ ಕಡ್ಡಾಯ – ಸಿಎಂ ಮಮತಾ ಬ್ಯಾನರ್ಜಿ ಕಟ್ಟುನಿಟ್ಟು : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸುಪ್ರೀಂ ಕೋರ್ಟ್ ನ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಮತ್ತು ತಾರ್ತಿಕ ವ್ಯತ್ಯಾಸಗಳ ಹೆಸರಿನಲ್ಲಿ ಜನರಿಗೆ ಯಾವುದೇ ಕಿರಿಕ್ ಕಿರುಕುಳ ನೀಡಬಾರದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದ ಎಲ್ಲಾ ವಿಚಾರಗಳು ಸುಪ್ರೀಂಕೋರ್ಟ್ ನಿರ್ದೇಶನಗಳ ಅನುಸಾರವೇ ನಡೆಯಬೇಕು. ತಾರ್ಕಿಕ ವ್ಯತ್ಯಾಸಗಳ ನೆಪದಲ್ಲಿ ಜನರು ಅನಾನುಕೂಲತೆಗೆ ಒಳಗಾಗುವಂತೆ ಮಾಡಬಾರದು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.

ಮಂಗಳವಾರ ಸಚಿವಾಲಯ ನಬನ್ನಾಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅಧ್ಯಕ್ಷತೆಯಲ್ಲಿ ಮಾತನಾಡಿದ. ಸಿಎಂ ಎಸ್ಐಆರ್ ಪ್ರತಿಕ್ರಿಯೆ ಕಾರ್ಯದರ್ಶಿಕವಾಗಬೇಕು ಹಾಗೂ ಜನಸಾಮಾನ್ಯರು ಅನಗತ್ಯ ತೊಂದರೆ ಅನುಭವಿಸಬಾರದು ಎಂಬುದನ್ನು ಸ್ಪಷ್ಟವಾಗಿ ಸೂಚಿಸಿದ್ದಾರೆ. ಮತದಾರರ ಪಟ್ಟಿಯ ಪರಿಷ್ಕರಣೆ ತ್ರೀವ ಪ್ರಕ್ರಿಯೆ ಸಂವಿಧಾನಾತ್ಮಕ ಅತ್ಯಂತ ಮಹತ್ವವಾಗಿದ್ದು, ಇದರಲ್ಲಿ ಯಾವುದೇ ರೀತಿಯ ಪಕ್ಷಪಾತ ಅಥವಾ ಆಡಳಿತಾತ್ಮಕ ದೌರ್ಜನ್ಯ ನಡೆಯಬಾರದು ಎಂಬುದನ್ನು ಸಿಎಂ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಈ ಸೂಚನೆಗಳು ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿವೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.





ಗೈರುಹಾಜರಾದವರಿಗೆ ಪರ್ಯಾಯ ವ್ಯವಸ್ಥೆ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡ್ಡಿಯಾಗಬಾರದು – ಮಮತಾ ಬ್ಯಾನರ್ಜಿ ಸೂಚನೆ : ನಿಗದಿತ ದಿನಾಂಕಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಹಾಜರಾಗಲು ಕ್ರಿಯೆಗೆ ಹಾಜರಾಗಲು ಸಾಧ್ಯವಾಗದ ಪರ್ಯಾಯ ಮತದಾರರ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ವೇಳೆ ರಾಜ್ಯದ ಅಧಿಕಾರಿಗಳಿಗೆ ಭರವಸೆ ನೀಡಿದ ಮಮತಾ ಬ್ಯಾನರ್ಜಿ, ಅಧಿಕಾರಿಗಳು ಭಯಪಡುವ ಅಗತ್ಯವಿಲ್ಲ ಸರ್ಕಾರ ನಿಮ್ಮೊಂದಿಗೆ ದೃಢವಾಗಿ ನಿಂತಿದೆ ಎಂದು ಅಭಯ ನೀಡಿದ್ದಾರೆ. ಆಡಳಿತಾತ್ಮಕ ಕಾರ್ಯಗಳಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದ್ದಾರೆ. ಚುನಾವಣಾ ಆಯೋಗದ ಕಾರ್ಯಗಳು ಸಂವಿಧಾನಾತ್ಮಕವಾಗಿ ಮುಂದುವರೆಯಬೇಕು ಆದರೆ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಯಾವುದೇ ಸಂದರ್ಭದಲ್ಲೂಅಡ್ಡಿಯಾಗಬಾರದು ಎಂಬುದು ಸಿಎಂ ಖಡಕ್ ಆಗಿ ಸೂಚಿಸಿದ್ದಾರೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಪಾರದರ್ಶಕವಾಗಬೇಕು ಹಾಗೂ ಜನರಿಗೆ ಅನಗತ್ಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಇದರ ನಡುವೆ ಚುನಾವಣಾ ಆಯೋಗವು ಪಶ್ಚಿಮ ಬಂಗಾಳಕ್ಕೆ 11 ಹೆಚ್ಚುವರಿ ವೀಕ್ಷಕರನ್ನು ನಿಯೋಜಿಸಿದು ರಾಜ್ಯದಲ್ಲಿ ಒಟ್ಟು ರೋಲ್ ವೀಕ್ಷಕರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರಿಂದ ಈ ಮಹತ್ವದ ನಿರ್ದೇಶನಗಳು ಹೊರಬಂದಿವೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಆಡಳಿತ ಹಾಗೂ ಚುನಾವಣಾ ಆಯೋಗದ ನಡುವಿನ ಸಮನ್ವಯ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ನಿರಂತರತೆ ಕುರಿತಂತೆ ಈ ಹೇಳಿಕೆಗಳು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಇದರ ನಡುವೆಯೇ ಚುನಾವಣಾ ಆಯೋಗವು ಪಶ್ಚಿಮ ಬಂಗಾಳಕ್ಕೆ 11 ಹೆಚ್ಚುವರಿ ವೀಕ್ಷಕರನ್ನು ನಿಯೋಜಿಸಿದ್ದು, ರಾಜ್ಯದಲ್ಲಿ ಒಟ್ಟು ರೋಲ್ ವೀಕ್ಷಕರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರಿಂದ ಈ ಮಹತ್ವದ ನಿರ್ದೇಶನಗಳು ಹೊರಬಂದಿವೆ.


ಮತದಾರರ ತೊಂದರೆಗೆ ಮಾನವೀಯ ಪರಿಹಾರ ಅಗತ್ಯ – ಮಮತಾ ಬ್ಯಾನರ್ಜಿ : ಎಸ್ಐಆರ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮಹತ್ವದ ನಿರ್ದೇಶನಗಳನ್ನು ನೀಡಿದೆ. ತಾರ್ಕಿಕ ವ್ಯತ್ಯಾಸಗಳ ಹಿನ್ನೆಲೆಯಲ್ಲಿ ಪರಿಷ್ಕರಣೆಗೆ ಒಳಪಡಬೇಕಾದ ಮತದಾರರ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ನ್ಯಾಯಾಲಯ ಆದೇಶದಲ್ಲಿ ಈ ಬೆಳವಣಿಗೆ ನಡೆಯುವ ತಾರ್ಕಿಕ ವ್ಯವಸ್ಥೆಗಳ ಕುರಿತು ಎಸ್ಐಆರ್ ವಿಚಾರವಾಗಿ ಜನರು ಅನಗತ್ಯ ತೊಂದರೆ ಎದುರಿಸುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಕಳಗಳ ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಯನ್ನು ಕೇವಲ ಆಡಳಿತಾತ್ಮಕವಾಗಿ ಅಲ್ಲ ಮಾನವೀಯ ದೃಷ್ಟಿಕೋನದಿಂದ ನೋಡಬೇಕು ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಇದಕ್ಕೂ ಮುನ್ನ ಮತದಾರರು ಸಲ್ಲಿಸುವ ದಾಖಲೆಗಳಿಗೆ ಕಡ್ಡಾಯವಾಗಿ ರಸೀದಿಗಳನ್ನು ನೀಡಬೇಕು ಹಾಗೂ ಪರಿಶೀಲನೆ ಪ್ರಕ್ರಿಯೆಯ ವೇಳೆ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರ ಮತದಾರರೊಂದಿಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಇದರಿಂದ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸ ಹೆಚ್ಚಿಸಲಿದೆ ಎಂದು ವಿಶ್ಲೇಷಿಸಿದ್ದಾರೆ. ಮತದಾರರ ಹಕ್ಕುಗಳು ಚುನಾವಣಾ ಪ್ರಕ್ರಿಯೆ ಪಾರದರ್ಶಕತೆ ಮತ್ತು ಜನಸಾಮಾನ್ಯರ ಅನುಕೂಲತೆಯ ಕುರಿತು ಸುಪ್ರೀಂ ಕೋರ್ಟ್ ಹಾಗೂ ರಾಜ್ಯ ಸರ್ಕಾರ ಒತ್ತಡ ನೀಡುತ್ತಿರುವುದು ಈ ಬೆಳವಣಿಗೆಗಳು ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಅತ್ಯಂತ ಮಹತ್ವ ಪಡೆದುಕೊಂಡಿವೆ.





ಪಶ್ಚಿಮ ಬಂಗಾಳದ ಸಿಎಂ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ : ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಒಂದು ವಿಚಿತ್ರ ಮತ್ತುಗಮನಾರ್ಯ ಘಟನೆ ಜರುಗಿದೆ. ಹರಿಶ್ಚಂದ್ರಪುರ ಬ್ಲಾಕ್ ೧ರ ದೌಲತ್ ಪುರ ಗ್ರಾಮದಲ್ಲಿ ವಾಸಿಸುತ್ತಿರುವ ಸಲೇಕ್ ಎಂಬ ವ್ಯಕ್ತಿ, ತಾನ ಭಾರತೀಯ ಎಂಬುದನ್ನು ಮತ್ತು ಪೂರ್ವಜರು ಇಲ್ಲಿಯವರೆಗೆ ಎಂಬುದನ್ನು ಸಾಬೀತು ಮಾಡಲು ಅಜ್ಜನ ಸಮಾಧಿಯ ಮಣ್ಣು ತಂದು ಡಿಎನ್ಎ ಪರೀಕ್ಷೆ ನಡೆಸಲು ಒತ್ತಾಯಿಸಿದ್ದಾನೆ. ಸಲೇಕ್ ಈಗಾಗಲೇ ಚುನಾವಣಾ ಅಧಿಕಾರಿಗಳಿಗೆ ಹಲವು ಅಧಿಕಾರಿಗಳನ್ನು ಸಲ್ಲಿಸಿದ್ದರು. ಪದೇ ಪದೇ ವಿಚಾರಣೆಗೆ ಕರೆದಿರುವ ಹಿನ್ನೆಲೆಯಲ್ಲಿ ನಿರಾಶಗೊಂಡು ಇಂತಹ ಅಸಾಮಾನ್ಯ ಕ್ರಮಕ್ಕೆ ಹೋದನು. ಈ ಘಟನೆ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಸ್ಕರಣೆ ಪ್ರಕ್ರಿಯೆ ವಿಚಿತ್ರ ಘಟನೆಗಳ ಪೈಕಿ ಒಂದು ಎಂದು ವರದಿ ಮಾಡಲಾಗಿದೆ, ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಪರಿಶೀಲನೆ ಮತ್ತು ಎಸ್ಐಆರ್ ಸಂಬಂಧಿತ ಭ್ರಷ್ಟಾಚಾರ ಮತ್ತು ಅನಾನುಕೂಲತೆ ತಡೆಯುವ ಪ್ರಯತ್ನಗಳು ಮುಂದುವರೆಯುತ್ತಿವೆ, ಆದರೆ ಕೆಲವೊಂದು ವಿಚಿತ್ರ ಪ್ರಕಾರಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ. ಅಧಿಕಾರಿಗಳು ಈ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ ಮತ್ತು ಮತದಾರರ ಪಟ್ಟಿಯ ಪರಿಶೀಲನೆ ಪ್ರಕ್ರಿಯೆಯ ಸರಳತೆ ಹಾಗೂ ಪಾರದರ್ಶಕತೆಗಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ. ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು ಎಂಬ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ರೀತಿಯ ಅನಾವಶ್ಯಕ ತೊಂದರೆಗಳು ಗಮನ ಸೆಳೆದಿದೆ.


ಇನ್ನಷ್ಟು ಓದಿರಿ:


ಗವರ್ನರ್ vs ಸರ್ಕಾರ್ : ಭಾಷಣದ ಸಾಲುಗಳ ಬದಲಾವಣೆಗೆ ತ್ರೀವ್ರ ವಿರೋಧ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online