<?= $pageTitle ?>
Logo
ಮುಖಪುಟ ಓದುವುದು ಕೇಳು
Politics

RSS ಕುರಿತು ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಕಿಡಿ

RSS ಕುರಿತು ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಕಿಡಿ
Summary: State BJP leaders have strongly attacked Home Minister Priyank Kharge's statement on the legality of RSS. The issue has led to a new controversy in state politics, with pro-opposition debates intensifying.

Belagavi News:

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾನೂನು ಬದ್ಧತೆ ಕುರಿತು ಆಕ್ಷೇಪ ವ್ಯಕ್ತಪಡಿಸಿ ಸರಸಂಘ ಚಾಲಕ ಮೋಹನ್ ಭಗವತ್ ಅವರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್ ಅಶೋಕ್, ದೇಶ ವಿಭಜನೆಗೆ ಕಾರಣವಾದ ಮುಸ್ಲಿಂ ಲೀಗ್ ನಂತಹ ವಿಭಜನಕಾರಿ ಘಟನೆಯೊಂದಿಗೆ ಅಧಿಕಾರದ ಲಾಲಸೆಗಾಗಿ ಕಾಂಗ್ರೆಸ್ ರಾಜಕೀಯ ಮೈತ್ರಿ ಮಾಡಿಕೊಂಡು ಎರಡು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಇಂತಹ ಹಿನ್ನೆಲೆಯಲ್ಲಿ RSS ಕುರಿತು ಮಾತನಾಡುವ ನೈತಿಕತೆ, ಕಾಂಗ್ರೆಸ್ ಗೆ ಇಲ್ಲ ಎಂದು ಅವರು ಟೀಕಿಸಿದ್ದಾರೆ.

ಅಶೋಕ್ ಅವರ ಪ್ರಕಾರ, ವಿಧಾನಸೌಧದ ಮುಂದೆ ದೇಶವಿರೋಧಿ ಘೋಷಣೆಗಳು ಕೇಳಿ ಬಂದರೂ ಸರ್ಕಾರ ಕ್ರಮ ಕೈಗೊಳ್ಳದೆ ಮೌನ ವಹಿಸಿದೆ ಎಂದು ಆರೋಪಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ RSS ನ ಕಾನೂನು ಬದ್ಧತೆ ಮತ್ತು ದೇಶಭಕ್ತಿಯ ಬಗ್ಗೆ ಪ್ರಶ್ನೆ ಎತ್ತುವ ಹಾಸ್ಯತ್ವದ ಹಾಗೂ ನಾಚಿಕೆಗೇಡಿತನದ ನಡೆ ಎಂದು ಅವರು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ನಿಲುವುಗಳ ವಿರುದ್ಧ ಬಿಜೆಪಿ ನಾಯಕರು ಮತ್ತಷ್ಟು ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದು, ಈ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.

ಪ್ರಿಯಾಂಕ್ ಖರ್ಗೆ ವಿರುದ್ಧ ಆರ್ ಅಶೋಕ್ ತೀವ್ರ ವಾಗ್ದಾಳಿ - "ರಾಜಕೀಯ ತಂತ್ರ, ಹತಾಶ ಹಪಾಹಪಿ" ಎಂದು ಆರೋಪ:

ಗೃಹ ಸಚಿವ ಪ್ರಿಯಾಂ ಖರ್ಗೆ ಅವರ ಇತ್ತೀಚಿನ ರಾಜಕೀಯ ನಿಲುವುಗಳನ್ನು ಕುರಿತು ವಿಪಕ್ಷ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೈಕಮಾಂಡ್ ಒಲೈಕೆಗಾಗಿ ಸೈದ್ಧಾಂತಿಕ ವಿಷಯಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಇದು ರಾಜಕೀಯ ತಂತ್ರಗಾರಿಕೆಯ ಭಾಗ ಎಂದು ಹೇಳಿದ್ದಾರೆ.

ಆರ್ ಅಶೋಕ್ ಅವರ ಪ್ರಕಾರ, 2028ರ ವಿಧಾನಸಭಾ ಚುನಾವಣೆಯಲ್ಲೂ ತಾನೇ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿ ಆಗಬೇಕು ಎಂಬ ಹಗಲುಗನಸು ಡಿಕೆ ಶಿವಕುಮಾರ್ ಕಾಣುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನಲೆಯಲ್ಲಿ ಪಕ್ಷದೊಳಗಿನ ಸದ್ದಿಲ್ಲದ ಸ್ಪರ್ಧೆಯ ಭಾಗವಾಗಿ ಪ್ರಿಯಾಂಕ್ ಖರ್ಗೆ ಅವರು RSS ವಿಷಯವನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ದೆಹಲಿಯ ಹೈಕಮಾಂಡ್ ಅನ್ನು ಮುಚ್ಚಿಸಲು ಮತ್ತು ತಮ್ಮ ಸ್ಥಾನವನ್ನು ಬಲಪಡಿಸಲು ಇಂತಹ ಸೈದ್ಧಾಂತಿಕ ವಿವಾದಗಳನ್ನು ಅವರ ಆರೋಪವಾಗಿದೆ. ಇದು ಕರ್ನಾಟಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಇದೇ ವೇಳೆ, ಪ್ರಿಯಾಂಕ್ ಖರ್ಗೆ ಅವರಿಗೆ ಈವರೆಗೂ ನೀಡಲಾಗಿದ್ದ ಐಟಿ-ಬಿಟಿ ಗ್ರಾಮೀಣಾಭಿವೃದ್ಧಿ ಹಾಗು ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಗಳಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಅಶೋಕ್ ಟೀಕಿಸಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ ಮಾಡಿಕೊಂಡು, ಈಗ ಗೃಹ ಇಲಾಖೆ ಮೂಲಕ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಆರ್ ಅಶೋಕ್ ಅವರ ಪ್ರಕಾರ, ದಿನಪೂರ್ತಿ RSS ಕುರಿತು ಮಾತನಾಡುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗುವುದು ರಾಜಕೀಯ ಹತಾಶಯ ಲಕ್ಷಣವಾಗಿದೆ. ಇಂತಹ ತಂತ್ರಗಳಿಗೆ ಜನತೆ ತಕ್ಕ ಉತ್ತರ ನೀಡಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ವಿರುದ್ಧ ಬಿವೈ ವಿಜಯೇಂದ್ರ ತೀವ್ರ ವಾಗ್ದಾಳಿ - "ಭ್ರಮೆಯ ಪೊರೆ ಶೀಘ್ರದಲ್ಲೇ ಕಳಚಿ ಬೀಳಲಿದೆ" ಎಂದು ಟೀಕೆ:

ರಾಷ್ಟ್ರೀಯ ಸ್ವಯಂಸೇವಕ ಸಂಘ ಕುರಿತಾಗಿ ಗೃಹ ಸಚಿವ ಪ್ರಿಯಾಂಕರ್ ಗೆ ಅವರ ನಿಲುವುಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಸೈದ್ಧಾಂತಿಕ ವಿಚಾರಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಇದು ಸಾರ್ವಜನಿಕವಾಗಿ ದೀರ್ಘಕಾಲ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

ವಿಜಯೇಂದ್ರ ಅವರ ಪ್ರಕಾರ, RSS ಪಾರದರ್ಶಕತೆ, ರಾಷ್ಟ್ರೀಯ ಬದ್ಧತೆ ಹಾಗೂ ತ್ಯಾಗದ ಪ್ರತೀಕವಾಗಿ ಬೆಳೆದಿರುವ ವಿಶ್ವದ ದೊಡ್ಡ ಸಂಘಟನೆಗಳಲ್ಲಿ ಒಂದಾಗಿದೆ. ಅದರ ಚಟುವಟಿಕೆಗಳು ನೇರ ಹಾಗೂ ಬಹಿರಂಗವಾಗಿವೆ ಎಂದು ಅವರು ತಿಳಿಸಿದ್ದಾರೆ.

ಅವರು ಮುಂದುವರೆದು, ರಾಷ್ಟ್ರ ವಿರೋಧಿ ಚಟುವಟಿಕೆಗಳಿಗೆ ತೊಡಗಿರುವ ಸಂಘಟನೆಗಳ ಬಗ್ಗೆ ಸರ್ಕಾರದ ಗಮನ ಹರಿಸಬೇಕಿತ್ತು ಎಂದು ಪ್ರಶ್ನಿಸಿದ್ದಾರೆ. ಇಂತಹ ವಿಷಯಗಳಲ್ಲಿ ಕ್ರಮ ಕೈಗೊಳ್ಳದೆ RSS ಕುರಿತು ಮಾತ್ರ ಟೀಕೆ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನೆಹರು ಕುಟುಂಬ ಮತ್ತು ಯಂಗ್ ಇಂಡಿಯನ್ ಸಂಸ್ಥೆಯ ಕುರಿತು ಉಲ್ಲೇಖ ಮಾಡಿರುವ ವಿಜಯೇಂದ್ರ, ರಾಜಕೀಯ ಚರ್ಚೆಗಳನ್ನು ತಿರುಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರ ರಾಜಕೀಯ ಹೇಳಿಕೆಗಳು ಮಾಧ್ಯಮಗಳಲ್ಲಿ ಗಮನ ಸೆಳೆಯಲು ಮಾತ್ರ ಎಂಬ ರೀತಿಯ ಪ್ರಯತ್ನವಾಗಿದ್ದು, ಅದು ದೀರ್ಘಕಾಲ ನಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.

RSS ಕುರಿತು ಟೀಕೆಗಳು ರಾಜಕೀಯ ಬಂಡವಾಳಕ್ಕಾಗಿ ಮಾಡಲಾಗುತ್ತಿದ್ದು, ಅಂತಿಮವಾಗಿ ಈ "ಭ್ರಮೆಯ ಪೊರೆ ಶೀಘ್ರದಲ್ಲೇ ಕಳಚಿ ಬೀಳಲಿದೆ" ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಮತ್ತೊಂದು ಚರ್ಚೆಗೆ ಕಾರಣವಾಗಿವೆ.

RSS 'ಫೋಬಿಯಾ' ಆರೋಪ - ಪ್ರಿಯಾಂಕ್ ಖರ್ಗೆ ವಿರುದ್ಧ ಸುನಿಲ್ ಕುಮಾರ್ ತೀವ್ರ ವಾಗ್ದಾಳಿ :

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳ ಕುರಿತು ಬಿಜೆಪಿ ನಾಯಕ ಸುನಿಲ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. RSS ಕುರಿತು ಅವರ ನಿಲುವುಗಳನ್ನು ಉಲ್ಲೇಖಿಸಿ " RSS ಫೋಬಿಯಾ" ಮುಂದುವರೆದಿದೆ ಎಂದು ಟೀಕಿಸಿದ್ದಾರೆ.

ಸುನಿಲ್ ಕುಮಾರ್ ಅವರ ಪ್ರಕಾರ,"ಕೊಟ್ಟ ಕುದುರೆಯ ಏರಲರಿಯದ ವೀರ" ಎಂಬಂತೆ ಪ್ರಿಯಾಂಕ್ ಖರ್ಗೆ ಅವರ ರಾಜಕೀಯ ನಿಲುವುಗಳಿಗೆ ಯಾವುದೇ ಬದಲಾವಣೆ ಕಾಣುತ್ತಿಲ್ಲ . ಪರಿಸ್ಥಿತಿ ಬದಲಾದಾಗ ಮನೋಭಾವವು ಬದಲಾಗುತ್ತದೆ ಎಂಬ ನಿರೀಕ್ಷೆ ಇದ್ದರು ಅದು ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಅವರು ಮುಂದುವರೆದು, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿ ಮೂರು ವರ್ಷಗಳ ಅವಧಿಯಲ್ಲಿ ನಿರೀಕ್ಷಿತ ಸಾಧನೆ ನಡೆದಿಲ್ಲ ಎಂದು ಆರೋಪಿಸಿದ್ದಾರೆ. ಗ್ರಾಮೀಣ ರಸ್ತೆ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಗಳ ಕುರಿತು ಸ್ಪಷ್ಟ ಮಾಹಿತಿ ಇಲ್ಲದಿರುವುದು ರಾಜ್ಯದ ಜನರಿಗೆ ಇನ್ನೂ ಪ್ರಶ್ನೆಯಾಗಿ ಉಳಿದಿದೆ ಎಂದು ಅವರು ಟೀಕಿಸಿದ್ದಾರೆ.

RSS ಕುರಿತ ಟೀಕೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಲಾಗುತ್ತಿದೆ ಎಂಬುದು ಬಿಜೆಪಿ ನಾಯಕರ ಆರೋಪವಾಗಿದ್ದು, ಈ ವಿಚಾರ ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

Also Read:

ಭಾರತ VS ಶ್ರೀಲಂಕಾ ಅಲ್ಲ, 'ನಾಟಕ ರಂಗಭೂಮಿ' : ರೋಚಕ ಪಂದ್ಯಕ್ಕೆ ಟ್ವಿಸ್ಟ್

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online