<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಸಂಸತ್ ಚಲೋ ವೇಳೆ ಉದ್ವಿಗ್ನತೆ; ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

ಸಂಸತ್ ಚಲೋ ವೇಳೆ ಉದ್ವಿಗ್ನತೆ; ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ
Summary: The situation turned tense when the police stopped the Cockroach Janata Party workers who were marching to Parliament. The police resorted to lathi-charge to disperse the protesters, and a video of the incident has gone viral on social media. The development has led to a debate in the political circles.

Belagavi News :

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ರಾಜಧಾನಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ' ಕಾಕ್ರೋಚ್ ಜನತಾ ಪಾರ್ಟಿ' (CJP) ಆಯೋಜಿಸಿದ್ದ " ಚಲೋ ಸಂಸದ್ " ಮೆರವಣಿಗೆಯನ್ನು ತಡೆಯಲು ಪೊಲೀಸರು ಮುಂದಾದ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿತು.

ಮೆರವಣಿಗೆ ತಡೆಯುವ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಘಟನೆಯಿಂದಾಗಿ ಸಂಸತ್ ಮಾರ್ಗದ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಬೆಂಬಲಿಗರು ಜಂತರ್ ಮಂತರ್ ನಿಂದ ಸಂಸತ್ತಿನತ್ತ ಮೆರವಣಿಗೆ ನಡೆಸಲು ಮುಂದಾದರು.

ಆದರೆ, ಭದ್ರತಾ ಕಾರಣಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಈ ಮೆರವಣಿಗೆಗೆ ಅನುಮತಿ ನೀಡಿರಲಿಲ್ಲ. ಪ್ರತಿಭಟನಾ ಸ್ಥಳ ಹೊರತುಪಡಿಸಿ ಐದಕ್ಕಿಂತ ಹೆಚ್ಚು ಜನರ ಗುಂಪುಗೂಡುವುದು ಮತ್ತು ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿತ್ತು.

ನಿಷೇಧಾಜ್ಞೆ ನಡುವೆಯೂ ಸಂಸತ್ತಿನತ್ತ ತೆರಳಲು ಪ್ರತಿಭಟನಾಕಾರರು ಯತ್ನಿಸಿದಾಗ ಪೊಲೀಸರು ತಡೆದಿದ್ದು, ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾಗರಿಕರು ಯಾವುದೇ ಅನಧಿಕೃತ ಪ್ರತಿಭಟನೆಗಳಲ್ಲಿ ಭಾಗವಹಿಸಬಾರದು ಎಂದು ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ.

ಪೊಲೀಸರೊಂದಿಗೆ ಸಹಕರಿಸುವಂತೆ ಸೂಚಿಸಿರುವ ಅವರು, ನಿಷೇಧಿತ ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ನಗರದಲ್ಲಿ ಶಾಂತಿ ಮತ್ತು ಭದ್ರತೆ ಕಾಪಾಡಲು ಅಗತ್ಯ ಕ್ರಮಗಳನ್ನು ಮುಂದುವರಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online