<?= $pageTitle ?>
Logo
ಮುಖಪುಟ ಓದುವುದು ಕೇಳು
Education

ಹುಬ್ಬಳ್ಳಿಯ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ದುರಂತ : ಮನೆ ಕಟೌಟ್ ಬಿದ್ದು ಅವಾಂತರ

ಹುಬ್ಬಳ್ಳಿಯ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ದುರಂತ : ಮನೆ ಕಟೌಟ್ ಬಿದ್ದು ಅವಾಂತರ
Summary: ಹುಬ್ಬಳ್ಳಿಯಲ್ಲಿ ನಡೆದ ಮನೆ ಹಂಚಿಕೆ ಕಾರ್ಯಕ್ರಮದ ವೇಳೆ ಅಘಟಿತ ಘಟನೆ ಸಂಭವಿಸಿದ್ದು, ವೇದಿಕೆಯ ಬಳಿ ಅಳವಡಿಸಲಾಗಿದ್ದ ಭಾರಿ ಕಟೌಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮಹಿಳೆ ಸೇರಿ ಮೂವರು ಗಾಯಗೊಂಡಿದ್ದಾರೆ. ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಅವಘಡ ಸಂಭವಿಸಿದ ಕಾರಣ ಸ್ಥಳದಲ್ಲಿ ಕೆಲಕಾಲ ಆತಂಕ ವಾತಾವರಣ ನಿರ್ಮಾಣವಾಯಿತು.
Belagavi news :

ಹುಬ್ಬಳ್ಳಿಯಲ್ಲಿ ನಡೆದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಮನೆ ಹಂಚಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಬಾರಿ ಕಟೌಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ತಳದಲ್ಲೇ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.



ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ತೀವ್ರ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಕಟ್ ಔಟ್ ಬಿದ್ದಿದ್ದಕ್ಕೆ ಕಾರಣವೇನು , ಸುರಕ್ಷಿತಾಕ್ರಮಗಳಲ್ಲಿ ನಿರ್ಲಕ್ಷ್ಮವಿದೆಯೇ ಎಂಬುದರ ಕುರಿತು ತನಿಖೆ ಆರಂಭಿಸಲಾಗಿದ್ದು ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮದ ವೇಳೆ ಭಾರಿ ಅವಗಡ:
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಬೃಹತ್ ಕಟೌಟ್ ಕುಸಿದು ಬಿದ್ದ ಪರಿಣಾಮ ಮಹಿಳೆ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು (ಶನಿವಾರ) ಬೆಳಿಗ್ಗೆ ನಡೆದಿದೆ.



ಗಾಯಾಳುಗಳಲ್ಲಿ ಬ್ಯಾಹಟ್ಟಿ ಗ್ರಾಮದ ನಿವಾಸಿ ಶಂಕರ್ ಹಡಪದ (೩೨) ಹಾಗೂ ಗಂಗಾಧರ್ ನಗರದ ಶಾಂತಾ(೬೦) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬ ಗಾಯಾಳು ಮಂಜುನಾಥ್ ವರ್ಣೇಕರ್ (೩೩) ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಟೂರು ರಸ್ತೆಯ ಅಕ್ಕಪಕ್ಕ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟ್ಟೌಟ್ ಗಳನ್ನು ಅಳವಡಿಸಲಾಗಿತ್ತು. ಮಲ್ಲಿಕಾರ್ಜುನ್ ಖರ್ಗೆ ಕಟೌಟ್ ನಂತರ, ಸಿಎಂ ಮತ್ತು ಸಚಿವ ಜಮೀರ್ ಅವರ ಫೋಟೋಗಳಿಂದ ಕಟೌಟ್ ಗಳು ಒಂದರ ಮೇಲೆ ಒಂದು ಕುಸಿದು ಬಿದ್ದಿದ್ದು, ಅದರ ಕೆಳಗಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.



ಕಟೌಟ್ ಗಳು ಸುಮಾರು 30–35 ಅಡಿ ಎತ್ತರದಾಗಿದ್ದು, ಅವುಗಳಿಗೆ ಆಧಾರವಾಗಿ ಕಟ್ಟಿಗೆಗಳನ್ನು ಅಳವಡಿಸಲಾಗಿತ್ತು. ಕಟೌಟ್ ಕುಸಿದಾಗ ಆ ಕಟ್ಟಿಗೆಗಳು ದೇಹಕ್ಕೆ ಚುಚ್ಚಿಕೊಂಡು ಗಾಯಗಳು ತೀವ್ರತೆ ಹೆಚ್ಚಾಗಿದೆ ಎಂದು ಪೊಲೀಸ್ ತಿಳಿಸಿದ್ದಾರೆ.



ಘಟನೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಸುರಕ್ಷತಾ ಕ್ರಮಗಳಲ್ಲಿ ನಿರ್ಲಕ್ಷ ವಿಧಿಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.



ಹುಬ್ಬಳ್ಳಿಯಲ್ಲಿ ಐತಿಹಾಸಿಕ ಮನೆ ಹಂಚಿಕೆ ಕಾರ್ಯಕ್ರಮ :
ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಭಾರಿ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಈ ಬಾರಿ 42,345 ಬಡ ಕುಟುಂಬಗಳಿಗೆ ಮನೆಗಳ ಹಂಚಿಕೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸತೀಶ್ ಜಾರಕಿಹೊಳಿ, ಎಚ್.ಸಿ.ಮಹಾದೇವಪ್ಪ , ಎಚ್.ಕೆ.ಪಾಟೀಲ್ , ಕೆ.ಎಚ್.ಮುನಿಯಪ್ಪ , ಸಂತೋಷ್ ಲಾಡ್ ಸೇರಿದಂತೆ ರಾಜ್ಯದ ಎಲ್ಲಾ ಸಚಿವರು ಭಾಗವಹಿಸಲಿದ್ದಾರೆ.



ಕಾರ್ಯಕ್ರಮದಲ್ಲಿ ಎರಡುವರೆ ಲಕ್ಷಕ್ಕೂ ಹೆಚ್ಚು ಜನ ಸೇರಿರುವ ನಿರೀಕ್ಷೆ ಇದ್ದು, ರಾಜ್ಯದ ವಿವಿಧ ಜಿಲ್ಲೆಗಳಾದ ಹುಬ್ಬಳ್ಳಿ–ಧಾರವಾಡ , ಹಾವೇರಿ, ಗದಗ, ಬೆಳಗಾವಿ, ಕೊಪ್ಪಳಗಳಿಂದ ಜನರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಮೂಲಕ ಇಡೀ ದೇಶಕ್ಕೆ ಸಾಮಾಜಿಕ ನ್ಯಾಯ ಮತ್ತು ಬಡವರ ಕಲ್ಯಾಣ ಸಂದೇಶ ಹೋಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.



ಒಂದೇ ಸಮಯದಲ್ಲಿ ರಾಜ್ಯಾದ್ಯಂತ 42,345 ಬಡ ಕುಟುಂಬಗಳಿಗೆ ಮನೆಗಳನ್ನು ವಿತರಿಸುವುದು ಇದೆ ಮೊದಲ ಬಾರಿ ಆಗಿದ್ದು, ಇದನ್ನು ಐತಿಹಾಸಿಕ ಹೆಜ್ಜೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಈ ಹಿಂದೆ 32,789 ಮನೆಗಳನ್ನು ಹಂಚಿಕೆ ಮಾಡಲಾಗಿದ್ದು, ಮುಂದಿನ ಹಂತದಲ್ಲಿ 30,000 ಮನೆಗಳ ಹಂಚಿಕೆ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ. ಕಾರ್ಯಕ್ರಮದ ಸಿದ್ಧತೆಗಳ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಶಾಶ್ವಕ ಪ್ರಸಾದ್ ಅಬ್ಬಯ್ಯ ಅವರು ಶುಕ್ರವಾರ ವೇದಿಕೆ ಹಾಗೂ ಸ್ಥಳ ಪರಿಶೀಲನೆ ನಡೆಸಿದ್ದಾರೆ.


ಇನ್ನಷ್ಟು ಓದಿರಿ:


ಉತ್ತರ ಕರ್ನಾಟಕದ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್: ಫೆಬ್ರವರಿ 6ಕ್ಕೆ ಉದ್ಯೋಗ ಮೇಳ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online