“ಎಂಜಿನಿಯರ್ಗಳಾದ ನೀವು ನಿಮ್ಮ ಜ್ಞಾನ, ಸುಸ್ಥಿರತೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಬಳಸಿ ರಾಷ್ಟ್ರೀಯ ಸನ್ನದ್ಧತೆಯನ್ನು ಬಲಪಡಿಸಲು ಶ್ರಮಿಸಬೇಕು" ಎಂದು ಕರ್ನಾಟಕ ನೌಕಾನೆಲೆಯ ಫ್ಲಾಗ್ ಆಫೀಸರ್ ಕಮಾಂಡಿಂಗ್,ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಕರೆ ನೀಡಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾತನಾಡಿದ ಅವರು ಪದವಿ ಪಡೆಯುತ್ತಿರುವ ಇಂಜಿನಿಯರ್ ಗಳಿಗೆ ಭವಿಷ್ಯದ ಕುರಿತು ಮಹತ್ವದ ಸಂದೇಶ ನೀಡಿದರು.
"ರಾಷ್ಟ್ರದ ಪ್ರಗತಿ, ಭದ್ರತೆ ಮತ್ತು ಸಮೃದ್ಧಿಗೆ ನೀವು ನೀಡುವ ಕೊಡುಗೆಗಳಿಗೆ ಮುಂಚಿತವಾಗಿ ಶುಭ ಹಾರೈಸುತ್ತೇನೆ" ಎಂದು ಅಭಿನಂದಿಸಿದ ರಿಯರ್ ಅಡ್ಮಿರಲ್ ವಿಕ್ರಂ, ಇಂಜಿನಿಯರ್ ಗಳು ಕಂಡು ಹಿಡಿಯುವ ನೂತನ ತಂತ್ರಜ್ಞಾನಗಳು ಮನುಷ್ಯನು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತಿರಬೇಕು ಎಂದು ಹೇಳಿದರು.
ಇಂದಿನ ಯುಗದಲ್ಲಿ ಹವಾಮಾನ ಬದಲಾವಣೆ, ಆರೋಗ್ಯ ಸಮಸ್ಯೆಗಳ ಸುಧಾರಾಣೆ ಮತ್ತು ಸುಸ್ಥಿರ ಅಭಿವೃದ್ಧಿ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಲು ತಂತ್ರಜ್ಞಾನ ಅತ್ಯಗತ್ಯವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು. ಯುವ ಎಂಜಿನಿಯರ್ಗಳು ಸಮಾಜಮುಖಿ ಚಿಂತನೆಯೊಂದಿಗೆ ನಾವಿನ್ಯತೆಯನ್ನು ಅಳವಡಿಸಿಕೊಂಡಾಗ ಮಾತ್ರ ದೇಶದ ಭವಿಷ್ಯವನ್ನು ಬಲಿಷ್ಠವಾಗಿ ಕಟ್ಟಲು ಸಾಧ್ಯ ಎಂದು ಹೇಳಿದರು.
ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಸೇರಿ ಅಂದಾಜು 2000 ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ.ಸಿ.ಸುಧಾಕರ್ ಮಹತ್ವದ ಘೋಷಣೆ ಮಾಡಿದರು. ವಿಡಿಯು 25ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು ಸರ್ಕಾರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನೌಕರರ ಕೊರತೆಗಳನ್ನು ನಿವಾರಿಸುವ ಉದ್ದೇಶದಿಂದ ಹುದ್ದೆಗಳ ಭರ್ತಿಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದರು. ಈ ಮೂಲಕ ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆ ನಿವಾರಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.
“ವಿಟಿಯು ಉತ್ತಮ ಕೆಲಸಗಳನ್ನು ಮಾಡುತ್ತಿದೆ” ಎಂದು ಶ್ಲಾಘಿಸಿದ ಡಾ.ಎಂ.ಸಿ. ಸುಧಾಕರ್, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಸಹಕಾರದೊಂದಿಗೆ ಸೆಂಟರ್ ಆಫ್ ಎಕ್ಸಲೆನ್ಸ್ಆ ರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಇದು ರಾಜ್ಯದ ತಾಂತ್ರಿಕ ಶಿಕ್ಷಣಕ್ಕೆ ಹೊಸ ಆಯಾಮ ನೀಡಲಿದೆ ಎಂದರು. ಇದು ಪದವಿ ಪಡೆದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ, "ಸಚಿವರು ನಿಮ್ಮ ಜೀವನ ಉಜ್ವಲವಾಗಲಿ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ನಿಮ್ಮ ಕೊಡುಗೆ ಮಹತ್ವದಾಗಿರಲಿ"ಎಂದು ಆಶಯ ವ್ಯಕ್ತಪಡಿಸಿದರು.
ಕೃತಕ ಬುದ್ಧಿಮತ್ತೆ, ಕ್ವಾಂಟಮ್ ಕಂಪ್ಯೂಟಿಂಗ್, ಅಡ್ವಾನ್ಸ್ ಕಮ್ಯೂನಿಕೇಶನ್ ಮತ್ತು ಸೈಬರ್ ಸೆಕ್ಯೂರಿಟಿ ಸೇರಿದಂತೆ ಅತ್ಯಧುನಿಕ ತಂತ್ರಜ್ಞಾನಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಿಕೊಂಡಿರುವ ಮತ್ತು ಮೂಲಕ ವಿಶೇಷ ತಾಂತ್ರಿಕ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದು ಕರ್ನಾಟಕ ನೌಕ ನೆಲೆಯ ಫ್ಲಾಗ್ ಆಫೀಸರ್ ಕಮಾಂಡಿಂಗ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹೇಳಿದರು. ವಿಟಿಯು ಘಟಿಕೋತ್ಸವದಲ್ಲಿ ಮಾತನಾಡಿದವರು,
ಈ ಎಲ್ಲಾ ತಂತ್ರಜ್ಞಾನಗಳು ರಾಷ್ಟ್ರದ ಪ್ರಗತಿ ಮತ್ತು ಭದ್ರತೆಗೆ ಅತ್ಯಂತ ಅಗತ್ಯವಾದ ಕ್ಷೇತ್ರಗಳು ಎಂದು ಅಭಿಪ್ರಾಯಪಟ್ಟರು. ಶಿಕ್ಷಣ ,ಸಂಶೋಧನೆ ಮತ್ತು ನವೀನತೆಯಲ್ಲಿ ಸಹಕಾರವನ್ನು ಬಲಪಡಿಸುವ ಉದ್ದೇಶದಿಂದ ವಿಟಿಯು ಮತ್ತು ನೌಕಾನೆಲೆ ನಡುವಿನ ಒಪ್ಪಂದಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಅವರು ಸ್ಪಷ್ಟಪಡಿಸಿದರು. ಸಂಶೋಧಕರು ಹಾಗೂ ನೌಕಾಪಡೆಯ ಸಿಬ್ಬಂದಿ ರಕ್ಷಣಾ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಸಂಕೀರ್ಣ ಸವಾಲುಗಳನ್ನು ಸಂಯುಕ್ತವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು .
ವಿಟಿಯು ಏರೋಸ್ಪೇಸ್ ಮತ್ತು ಡಿಫೆನ್ಸ್ ಕ್ಷೇತ್ರದಲ್ಲಿ "ಸೆಂಟರ್ ಆಫ್ ಎಕ್ಸಲೆನ್ಸ್" ಸ್ಥಾಪನೆ ಮುಂದಾಗಿರುವುದು ಹಾಗೂ ಡಿಫೆನ್ಸ್ ಟೆಕ್ನಾಲಜಿಯಲ್ಲಿ ಪ್ರಸ್ತಾಪಿತ ಎಂ.ಟೆಕ್ ಕಾರ್ಯಕ್ರಮಗಳು, ವಿಶ್ವವಿದ್ಯಾಲಯವು ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಾಭಿವೃದ್ಧಿ ನೀಡುತ್ತಿರುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ವಿಕ್ರಂ ಮೆನನ್ ಹೇಳಿದರು. ಒಟ್ಟಿನಲ್ಲಿ, ವಿಟಿಯು ಕೈಗೊಂಡಿರುವ ಈ ಕ್ರಮಗಳು ಭಾರತದ ರಕ್ಷಣಾ ತಂತ್ರಜ್ಞಾನ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು ನೀಡುವ ಸಾಧ್ಯತೆ ಹೊಂದಿವೆ.
ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಸೇರಿ ಅಂದಾಜು 2000 ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ 186, ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ 941, ಕಾಲೇಜು ಶಿಕ್ಷಣ ಇಲಾಖೆಯಲ್ಲಿ 826 ಹಾಗೂ ಯುವಿಸಿಇ ಯಲ್ಲಿ 79 ಹುದ್ದೆಗಳು ಖಾಲಿಯಿದೆ.
ಈ ಎಲ್ಲಾ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇದರಿಂದ ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ನೌಕರರ ಕೊರತೆಯನ್ನು ನಿಗಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಈ ಹಿನ್ನಲೆಯಲ್ಲಿ ಏಷ್ಯಾದ ಡೆವಲಪ್ಮೆಂಟ್ ಬ್ಯಾಂಕ್ ಸರ್ಕಾರದೊಂದಿಗೆ ಸೆಂಟರ್ ಆಫ್ ಎಕ್ಸಲೆನ್ಸ್ ಆರಂಭಿಸಲಾಗಿದೆ ಎಂದು ಘೋಷಿಸಿದರು.
ಪದವಿ ಪಡೆದ ವಿದ್ಯಾರ್ಥಿಗಳಿಗೆ ಶುಭ ಶುಭಾಶಯಗಳು ತಿಳಿಸಿದ ಡಾಕ್ಟರ್. ಎಂ.ಸಿ. ಸುಧಾಕರ್ ಇಂದು ಪದವಿ ಪಡೆದ ವಿದ್ಯಾರ್ಥಿಗಳ ಜೀವನ ಉಜ್ವಲವಾಗಿರಲಿ ಎಂದು ಹಾರೈಸಿದರು. ಈ ಘೋಷಣೆಗಳು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಬಲ ನೀಡುವ ನಿರ್ಣಾಯಕ ಹೆಜ್ಜೆ ಎಂದು ಶಿಕ್ಷಣ ವಲಯದಲ್ಲಿ ಅಭಿಪ್ರಾಯಪಟ್ಟರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಮಾತನಾಡಿದ ಥಾವರ ಚಂದ್ ಗೆಹ್ಲೋಟ್,
"ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯೊಂದಿಗೆ ಈ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದಾರೆ. ತಂತ್ರಜ್ಞಾನಗಳು ಸಾಮಾನ್ಯ ವರ್ಗದ ಜನರ ಸಮಸ್ಯೆಗಳನ್ನು ಬಗೆಹರಿಸುವಂತಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇದೇ ವೇಳೆ ಆತ್ಮವಿಶ್ವಾಸದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಸಂಕಲ್ಪದಲ್ಲಿ ಯುವ ಪೀಳಿಗೆ ಪಾತ್ರ ಮಹತ್ವದ್ದು ಎಂದು ತಿಳಿಸಿದ ಅವರು.
ಈ ಗುರಿ ಸಾಧನೆಗೆ ಜ್ಞಾನ ಕಠಿಣ ಪರಿಶ್ರಮ ಮತ್ತು ಕರ್ತವ್ಯ ಪ್ರಜ್ಞೆ ಮುಖ್ಯ ಎಂದರು. ಕರ್ನಾಟಕದ ಪಾತ್ರವನ್ನು ವಿವರಿಸಿದ ರಾಜ್ಯಪಾಲರು ಜ್ಞಾನ, ನಾವಿನ್ಯತೆ ಮತ್ತು ಉತ್ತಮ ಆಡಳಿತದಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಪ್ರಸ್ತುತ ರಾಜ್ಯವು ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ವಿಜ್ಞಾನ, ನವೋದ್ಯಮ, ಸಂಸ್ಕೃತಿ ಹಾಗೂ ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ದೇಶಕ್ಕೆ ದಾರಿ ತೋರಿಸುತ್ತಿದೆ ಎಂದು ಹೇಳಿದರು.
ಇನ್ನಷ್ಟು ಓದಿರಿ:
ಶಿಯೋಮಿ ಭಾರತದ ಗ್ರಾಹಕರಿಗಾಗಿ 15 ವರ್ಷ ಪ್ರೀಮಿಯಂ ಸರ್ವಿಸ್ ಸೆಂಟರ್ ಗಳು ಘೋಷಣೆ