2 articles found
ವಾಯುಭಾರ ಕುಸಿತದ ಪ್ರಭಾವದಿಂದ ಬೆಂಗಳೂರು , ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಮಳೆಯಾಗುದಾಗಿ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆಯ ವಾತಾವರಣವೇ ಇದೆ. ಆದರೆ ಹೊಸ ವರ್ಷದ ಕೊಡುಗೆಯೆಂಬಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.
© H16news.online . All Rights Reserved. Designed by H16news.online